ಸೀಮಾ ಕಾಮತ್‌ಗೆ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
ಹೆಬ್ರಿ, ಸೆ.6: ಚಾಣಕ್ಯ ಏಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಸಾಹಿತಿ, ಶಿಕ್ಷಕ ಅಂಬಾತನಯ ಮುದ್ರಾಡಿ ಸ್ಮರಣಾರ್ಥ ಕೊಡ ಮಾಡುವ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಕಾರ್ಕಳ ಭುವನೇಂದ್ರ ಆಂಗ್ಲ ಮಾದ್ಯಮ ಶಾಲೆಯ ಬಹುಮುಖ ಪ್ರತಿಭಾ ಶಿಕ್ಷಕಿ ಸೀಮಾ ಕಾಮತ್ ಅವರಿಗೆ ಮಂಗಳ ವಾರ ಹೆಬ್ರಿ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ಅವಿಭಜಿತ ಜಿಲ್ಲೆಯ ಜವಳಿ ವರ್ತಕರ ಸಂಘದ ಅಧ್ಯಕ್ಷ ಯೋಗೀಶ್ ಭಟ್ ಪ್ರಶಸ್ತಿ ಪ್ರದಾನ ಮಾಡಿದರು. ಅಧ್ಯಕ್ಷತೆಯನ್ನು ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲೆ ವೀಣಾ ಯು.ಶೆಟ್ಟಿ ವಹಿಸಿದ್ದರು. ಅಂಬಾತನಯ ಮುದ್ರಾಡಿ ಅವರ ಪುತ್ರ ಮುದ್ರಾಡಿ ಗ್ರಾಪಂ ಸದಸ್ಯ ಸನತ್ ಕುಮಾರ್ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣಾಧಿ ಕಾರಿ ಸೀತಾನದಿ ವಿಠ್ಠಲ ಶೆಟ್ಟಿ, ಹೆಬ್ರಿ ಜೇಸಿಐ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಹೆಬ್ರಾಯ್ ಅಧ್ಯಕ್ಷ ದಿನಕರ್ ಪ್ರಭು, ಹೆಬ್ರಿ ಸಿಟಿ ಲಯನ್ಸ್ ಅಧ್ಯಕ್ಷ ರಘುರಾಮ ಶೆಟ್ಟಿ, ಲಯನ್ಸ್ ಪ್ರಮುಖ ಟಿ.ಜಿ. ಆಚಾರ್ಯ, ಜೇಸಿರೆಟ್ ಅಧ್ಯಕ್ಷೆ ಅನಿತಾ ಪಿ.ಶೆಟ್ಟಿ, ನವೋದಯ ವಿದ್ಯಾಲಯದ ಚಿತ್ರಕಲಾ ಶಿಕ್ಷಕ ದಿನೇಶ್, ಉಷಾ ಬಾಳಿಗ, ನಿತ್ಯಾನಂದ ಭಟ್, ಸುಬ್ರಹ್ಮಣ್ಯ ಕಂಗಿನಾಯ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಉದಯ ಶೆಟ್ಟಿ ಸ್ವಾಗತಿಸಿ, ಶಿಕ್ಷಕ ಚಂದ್ರಶೇಖರ್ ಭಟ್ ಕಾರ್ಯಕ್ರಮ ನಿರೂಪಿಸಿದರು