ವಿದ್ಯಾರ್ಥಿಗಳಿಗೆ ಸ್ವಚ್ಛತಾ ಮಾಹಿತಿ ಕಾರ್ಯಕ್ರಮ

Update: 2023-08-12 13:11 GMT

ಉಡುಪಿ, ಆ.12: ತೋನ್ಸೆ ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಯ ಇಕೋ ಕ್ಲಬ್, ಉಡುಪಿ ಜಿಲ್ಲಾ ಪಂಚಾಯತ್ ಸ್ವಚ್ಛತಾ ಮಿಷನ್, ಸ್ಥಳೀಯ ತೋನ್ಸೆ ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ತರಬೇತುದಾರರಾಗಿ ಆಗಮಿಸಿದ ಉಡುಪಿ ಜಿಲ್ಲಾ ಸ್ವಚ್ಛತಾ ಮಿಷನ್ ಇದರ ಸಂಯೋಜಕಿ ವೀಣಾ, ಕಸ ವಿಂಗಡಣೆಯ ಬಗ್ಗೆ, ಸರಿಯಾದ ರೀತಿಯಲ್ಲಿ ಕೈ ತೊಳೆಯುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

ವಿದ್ಯಾರ್ಥಿಗಳು ಈ ಸ್ವಚ್ಛತೆಯ ಕುರಿತಾಗಿ ಮಾಹಿತಿ ಪಡೆದುಕೊಂಡರು. ವೇದಿಕೆಯಲ್ಲಿ ತೋನ್ಸೆ ಗ್ರಾಪಂ ಕಾರ್ಯದರ್ಶಿ ದಿನಕರ ಬೆಂಗ್ರೆ, ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ, ಮುಖ್ಯ ಶಿಕ್ಷಕಿ ಸುನಂದ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News