ಆಗಸ್ಟ್ 1ರಂದು ಉಡುಪಿಗೆ ಸಿಎಂ ಸಿದ್ದರಾಮಯ್ಯ ಭೇಟಿ

Update: 2023-07-31 15:48 GMT

ಉಡುಪಿ, ಜು.31: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ಉಡುಪಿಗೆ ಆಗಮಿಸಲಿದ್ದು, ಇತ್ತೀಚೆಗೆ ಪ್ರಕೃತಿ ವಿಕೋಪದಿಂದ ಜಿಲ್ಲೆಯಲ್ಲಿ ಆಗಿರುವ ಹಾನಿಯ ಕುರಿತಂತೆ ಪರಿಶೀಲನೆ ನಡೆಸಲಿದ್ದಾರೆ.

ಬೆಳಗ್ಗೆ 11:00ಗಂಟೆಗೆ ಹೆಜಮಾಡಿಗೆ ಆಗಮಿಸುವ ಮುಖ್ಯಮಂತ್ರಿಗಳನ್ನು ಹೆಜಮಾಡಿ ಟೋಲ್‌ಗೇಟ್ ಬಳಿ ಜಿಲ್ಲಾ ಕಾಂಗ್ರೆಸ್ ನಾಯಕರು ಸ್ವಾಗತಿಸಲಿದ್ದಾರೆ. ಅಲ್ಲಿಂದ ಪಡುಬಿದ್ರಿ ಬೀಚ್‌ಗೆ ತೆರಳಿ ಇತ್ತೀಚೆಗೆ ಆದ ಕಡಲು ಕೊರೆತವನ್ನು ವೀಕ್ಷಿಸುವರು.

ಬಳಿಕ ಉಡುಪಿಗೆ ಆಗಮಿಸುವ ಮುಖ್ಯಮಂತ್ರಿಗಳು ಅಪರಾಹ್ನ 12:30ಕ್ಕೆ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುವ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ನೇರವಾಗಿ ಮಂಗಳೂರಿಗೆ ತೆರಳಲಿರುವರು.

ಜಿಲ್ಲಾ ಉಸ್ತುವಾರಿ ಸಚಿವೆ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಆ.1ಕ್ಕೆ ಉಡುಪಿಗೆ ಆಗಮಿಸಲಿದ್ದು ಅಪರಾಹ್ನ 12:30ಕ್ಕೆ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಖ್ಯಮಂತ್ರಿಗಳೊಂದಿಗೆ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಅನಂತರ ಅವರು ನೇರವಾಗಿ ಬಜ್ಪೆಗೆ ತೆರಳಿ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News