ಅಜಾತಶತ್ರು ಆಸ್ಕರ್‌ರಿಂದ ಕರಾವಳಿ ಅಭಿವೃದ್ಧಿ: ಪ್ರತಾಪಚಂದ್ರ ಶೆಟ್ಟಿ

Update: 2023-09-15 15:08 GMT

ಉಡುಪಿ: ಅಜಾತಶತ್ರುವೆನಿಸಿದ್ದ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡೀಸ್ ಅವರ ದೂರದೃಷ್ಟಿಯಿಂದಾಗಿ ಕರಾವಳಿಯ ಉಡುಪಿ ಮತ್ತು ಮಂಗಳೂರು ಅಭಿವೃದ್ಧಿಯನ್ನು ಕಂಡಿದೆ. ಆದರೆ ತಾನು ಮಾಡಿದ ಅಭಿವೃದ್ದಿ ಕೆಲಸಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳದೆ ಅವರು ಇತರರಿಗೆ ಮಾದರಿ ಯಾಗಿದ್ದರು ಎಂದು ವಿಧಾನಪರಿಷತ್‌ನ ಮಾಜಿ ಸಭಾಪತಿಗಳಾದ ಪ್ರತಾಪ್‌ಚಂದ್ರ ಶೆಟ್ಟಿ ಹೇಳಿದ್ದಾರೆ.

ದಿ.ಆಸ್ಕರ್ ಫೆರ್ನಾಂಡೀಸ್ ಅವರ ಎರಡನೇ ಪುಣ್ಯತಿಥಿ ಸಂದರ್ಭದಲ್ಲಿ ಬ್ರಹ್ಮಗಿರಿಯ ನಾಯರ್‌ಕೆರೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದ ಆವರಣದಲ್ಲಿರುವ ಆಸ್ಕರ್ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡುತಿದ್ದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಆಸ್ಕರ್ ಅವರ ಕಾರ್ಯವೈಖರಿ ಯನ್ನು ನೆನಪಿಸಿಕೊಳ್ಳುತ್ತಾ ಮಾತನಾಡಿ, ಅವರ ಪ್ರಯತ್ನದಿಂದ ಜಿಲ್ಲಾ ಕಾಂಗ್ರೆಸ್ ಭವನ ತಲೆ ಎತ್ತಿ ನಿಲ್ಲಲು ಕಾರಣವಾಗಿದೆ. ಹಾಗೂ ಜಿಲ್ಲೆಯಲ್ಲಿ ಪಕ್ಷ ಬೆಳೆಯಲು ಪೂರಕ ವಾತಾವರಣ ಕಲ್ಪಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು, ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಮ್.ಎ.ಗಪೂರ್, ನಾಯಕರಾದ ದಿನೇಶ್ ಪುತ್ರನ್, ಮೇರಿ ಶ್ರೇಷ್ಠ, ವೆರೋನಿಕಾ ಕರ್ನೇಲಿಯೊ, ಗೀತಾ ವಾಗ್ಳೆ, ಹರೀಶ್ ಕಿಣಿ, ಉದ್ಯಾವರ ನಾಗೇಶ್ ಕುಮಾರ್, ಭುಜಂಗ ಶೆಟ್ಟಿ , ದಿನಕರ ಹೇರೂರು, ಕೃಷ್ಣಮೂರ್ತಿ ಆಚಾರ್ಯ, ವಂ.ವಿಲಿಯಂ ಮಾರ್ಟಿಸ್, ಮಹಾಬಲ ಕುಂದರ್, ಆನಂದ ಪೂಜಾರಿ, ರೋಶನ್ ಶೆಟ್ಟಿ, ಸಾಯಿರಾಜ್ ಮುಂತಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News