ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಉಡುಪಿಗೆ ಆಗಮನ

Update: 2023-07-26 19:36 IST
ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಉಡುಪಿಗೆ ಆಗಮನ
  • whatsapp icon

ಉಡುಪಿ: ಉಡುಪಿ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಸಂಜೆ ವೇಳೆ ಉಡುಪಿಗೆ ಆಗಮಿಸಿದ್ದಾರೆ.

ಈ ವೇಳೆ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜು ವಿದ್ಯಾರ್ಥಿಗಳ ಸಮಸ್ಯೆ ಕುರಿತು ವಿಚಾರಣೆಗೆ ಬಂದಿದ್ದೇನೆ. ನಾನು ಮೊದಲು ಈ ಸಂಬಂಧ ಪೊಲೀಸರನ್ನು ಭೇಟಿಯಾಗಿ ಎಫ್‌ಐಆರ್ ಸೇರಿದಂತೆ ಎಲ್ಲ ವಿಚಾರಗಳ ಕುರಿತು ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.

ಜು.27ರಂದು ಕಾಲೇಜಿಗೆ ಭೇಟಿ ಕೊಡುತ್ತೇನೆ, ಸಂತ್ರಸ್ತೆ ಮತ್ತು ಮೂವರು ವಿದ್ಯಾರ್ಥಿನಿಯರ ಜೊತೆ ಕೂಡ ಮಾತನಾಡುತ್ತೇನೆ. ಕಾಲೇಜಿನ ಆಡಳಿತ ಮಂಡಳಿ ಜೊತೆ ಕೂಡಾ ಮಾತನಾಡುತ್ತೇನೆ. ಎಲ್ಲರ ಜೊತೆ ಮಾತನಾಡಿದ ನಂತರ ನಾನು ಮಾಧ್ಯಮಗಳಿಗೆ ವಿವರಿಸುತ್ತೇನೆ. ಪ್ರಕರಣವನ್ನು ಸಂಪೂರ್ಣವಾಗಿ ನಾನು ಮೊದಲು ಆರಿತುಕೊಳ್ಳಬೇಕಾಗಿದೆ. ಒಟ್ಟು ಎರಡು ದಿನ ನಾನು ಇಲ್ಲಿ ಇರುತ್ತೇನೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News