ಉಡುಪಿ ಹತ್ಯಾಕಾಂಡ ಪ್ರಕರಣ ಬೇಧಿಸಿದ ಎಸ್ಪಿ ತಂಡಕ್ಕೆ ಕಾಂಗ್ರೆಸ್ ಅಭಿನಂದನೆ
ಉಡುಪಿ : ನೇಜಾರು ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಬಂಧಿಸಿರುವ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಮತ್ತು ಅವರ ತಂಡವನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಅಭಿನಂದಿಸಲಾಯಿತು.
ಉಡುಪಿ ಎಸ್ಪಿ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಅವರಿಗೆ ಹೂಗುಚ್ಛ, ಪುಸ್ತಕ ಹಾಗೂ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸ ಲಾಯಿತು. ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ ಈ ಪ್ರಕರಣದಿಂದಾಗಿ ಜನತೆ ಭಯದಲ್ಲಿ ಬದುಕುವ ವಾತಾವರಣ ಸೃಷ್ಠಿಯಾಗಿತ್ತು. ಜಿಲ್ಲೆಯ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಮೂರು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದರು.
ಈ ಭೀಕರ ಕೊಲೆ ಪ್ರಕರಣದ ತನಿಖೆ ಮುಂದುವರೆಸಿ, ಘಟನೆಯ ನಿಜಾಂಶ ವನ್ನು ಪತ್ತೆ ಹಚ್ಚಿ ಆದಷ್ಟು ಬೇಗ ನ್ಯಾಯಾಲ ಯದಲ್ಲಿ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಇಲಾಖೆಯಿಂದ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಕುಶಲ್ ಶೆಟ್ಟಿ, ಗಣೇಶ್ ನೆರ್ಗಿ, ಚಂದ್ರಮೋಹನ್ ಚಿಟ್ಪಾಡಿ, ಶರತ್ ಶೆಟ್ಟಿ, ಮಮತಾ ಶೆಟ್ಟಿ, ಸೌರಭ್ ಬಲ್ಲಾಳ್, ಶ್ರೀನಿವಾಸ್ ಹೆಬ್ಬಾರ್, ಕೃಷ್ಣ ಹೆಬ್ಬಾರ್, ಯತೀಶ್ ಕರ್ಕೇರ, ನಾಸಿರ್ ಯಾಕೂಬ್, ಶೇಖ್ ವಾಹಿದ್, ಹಸನ್ ಸಾಹೇಬ್, ತುಳಸಿದಾಸ್, ನವೀನ್ ಶೆಟ್ಟಿ, ಸತೀಶ್ ಕೊಡವೂರು, ಆನಂದ್ ಪೂಜಾರಿ, ಧನಂಜಯ್ ಕುಂದರ್, ಸುರೇಂದ್ರ ಆಚಾರ್ಯ, ಸುಮನಾ ಆಚಾರ್ಯ, ಅರ್ಚನಾ ದೇವಾಡಿಗ, ಶಾಲಿನಿ ಸಾಲ್ಯಾನ್, ನಾಗರಾಜ್ ಭಟ್ ಹಾಗೂ ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.
ನಮ್ಮ ನಾಡ ಒಕ್ಕೂಟ: ನೇಜಾರು ತಾಯಿ ಮಕ್ಕಳ ಹತ್ಯೆ ಪ್ರಕರಣದ ಬಗ್ಗೆ ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಸಮಿತಿ ಹಾಗೂ ಸೆಂಟ್ರಲ್ ಕಮಿಟಿ ಕಂಬನಿ ಮಿಡಿದಿದ್ದು, ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಉಡುಪಿ ಜಿಲ್ಲಾ ಪೊಲೀಸ್ ತಂಡ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಭಿನಂದನೆ ಸಲ್ಲಿಸಿದೆ.
ಈ ಕೃತ್ಯ ನಡೆಸಿದ ಆರೋಪಿಯನ್ನು ಕಾನೂನು ರೀತಿಯಲ್ಲಿ ತನಿಖೆ ಮಾಡಿ ಶಿಕ್ಷೆ ನೀಡಬೇಕು. ಬೆಚ್ಚಿ ಬೀಳಿಸುವ ಈ ಘಟನೆಯಿಂದ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಜಿಲ್ಲೆಯ ಜನತೆ ಭಯಭೀತರಾಗಿ ಮನೆಯಿಂದ ಹೊರಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ ಎಂದು ಒಕ್ಕೂಟದ ಉಡುಪಿ ಜಿಲ್ಲಾ ಅಧ್ಯಕ್ಷ ಮುಸ್ತಾಕ್ ಅಹಮದ್ ಬೆಳ್ವೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ನಮ್ಮ ನಾಡ ಒಕ್ಕೂಟ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೌಲಾನ ಝಮೀರ್ ಅಹ್ಮದ್ ರಷದಿ, ಸೆಂಟ್ರಲ್ ಕಮಿಟಿ ಪ್ರಧಾನ ಕಾರ್ಯದರ್ಶಿ ಹುಸೈನ್ ಹೈಕಾಡಿ, ಕುಂದಾಪುರ ತಾಲೂಕು ಅಧ್ಯಕ್ಷ ದಸ್ತಗೀರ ಸಾಹೇಬ್ ಕಂಡ್ಲೂರ್, ಉಡುಪಿ ತಾಲೂಕು ಅಧ್ಯಕ್ಷ ನಝೀರ್ ನೇಜಾರ್, ಸಮಾಜ ಸೇವಕ ಪೀರ್ ಸಾಹೇಬ್ ಉಡುಪಿ ಉಪಸಿತ್ದರಿದ್ದರು.