ಉಡುಪಿ -ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸಿಗೆ ಜಯ ಖಚಿತ: ಸಚಿವ ಮಂಕಾಲ ವೈದ್ಯ

Update: 2023-10-05 11:51 GMT

ಕುಂದಾಪುರ, ಅ.5: ಮುಂಬರುವ ಲೋಕಸಭಾ ಚುನಾವಣೆಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಒಮ್ಮತದ ಅಭ್ಯರ್ಥಿ ಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ವೀಕ್ಷಕ, ಮೀನುಗಾರಿಕಾ, ಬಂದರು ಒಳ ಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ.

ಕೋಟೇಶ್ವರದ ಸಹನಾ ಕನ್ವೆನ್ಷನ್ ಸೆಂಟರ್‌ನಲ್ಲಿ ಬುಧವಾರ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡುತಿದ್ದರು. ಲೋಕಸಭೆ ಯಲ್ಲಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಗಳಿಸುದ ರಲ್ಲಿ ಸಂಶಯವಿಲ್ಲ. ಪಕ್ಷ ಬಲವರ್ಧನೆಗೊಳ್ಳಲು ಯುವಕರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕಾಗಿದೆ ಎಂದರು.

ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮಾತನಾಡಿ, ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾ ರದ ಬಗ್ಗೆ ಸಮಗ್ರ ತನಿಖೆ ಮಾಡಲು ಸರಕಾರದ ಮೇಲೆ ಒತ್ತಡ ತರಬೇಕಾಗಿದೆ. ಈ ನಿಟ್ಟಿನಲ್ಲಿ ಅ.9ರಂದು ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿಗಳ ಆಯ್ಕೆಯನ್ನು ಹೈಕಮಾಂಡ್‌ನ ನಿರ್ಣಯಕ್ಕೆ ಬಿಡುವಂತೆ ಸರ್ವಾನುಮತದಿಂದ ನಿರ್ಣಯಿಸ ಲಾಯಿತು. ಪಕ್ಷಕ್ಕಾಗಿ ದುಡಿದು ಇತ್ತೀಚಿಗೆ ನಿಧನರಾದವರಿಗೆ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಜ್ಯೋತಿ ಹೆಬ್ಬಾರ್ ನುಡಿನಮನ ಸಲ್ಲಿಸಿದರು.

ಪಕ್ಷದ ಮುಖಂಡರಾದ ಎಂ.ಎ.ಗಫೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ವಿಕಾಸ್ ಹೆಗ್ಡೆ, ಮದನ್ ಕುಮಾರ್, ಬಿ.ನರಸಿಂಹಮೂರ್ತಿ, ಕುಶಲ ಶೆಟ್ಟಿ, ಭುಜಂಗ ಶೆಟ್ಟಿ, ದಿನಕರ ಹೇರೂರು, ಸದಾಶಿವ ದೇವಾಡಿಗ, ಪ್ರದೀಪ್ ಕುಮಾರ್ ಶೆಟ್ಟಿ, ಸಂತೋಷ್, ಶಂಕರ್ ಕುಂದರ್, ಚಂದ್ರಶೇಖರ ಬಾಯಿರಿ, ಅರವಿಂದ ಪೂಜಾರಿ, ದೀಪಕ್ ಕೋಟ್ಯಾನ್, ಮಲ್ಯಾಡಿ ಶಿವರಾಮ ಶೆಟ್ಟಿ, ಮಂಜುನಾಥ್ ಪೂಜಾರಿ, ಹಿರಿಯಣ್ಣ, ನೀರೆ ಕೃಷ್ಣ ಶೆಟ್ಟಿ , ಪ್ರಕಾಶ್ ಚಂದ್ರ ಶೆಟ್ಟಿ, ಅಮೃತ ಶೆಣೈ, ನವೀನ್ ಚಂದ್ರ ಶೆಟ್ಟಿ ಪಕ್ಷದ ಸಂಘಟನೆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು

ಮುಖಂಡರಾದ ವೆರೋನಿಕಾ ಕರ್ನೆಲಿಯೋ, ದಿನೇಶ್ ಪುತ್ರನ್, ದೇವಕಿ ಸಣ್ಣಯ್ಯ, ವಾಸುದೇವ ಯಡಿಯಾಳ, ಪ್ರಖ್ಯಾತ ಶೆಟ್ಟಿ, ಗೀತಾ ವಾಗ್ಳೆ, ಸರಸು ಬಂಗೇರ, ಮಹಾಬಲ ರೋಶನಿ ಒಲಿವೇರಾ, ಕೀರ್ತಿ ಶೆಟ್ಟಿ, ಪ್ರಶಾಂತ್ ಜತ್ತನ್ನ, ಶಬೀರ್ ಅಹ್ಮದ್, ಜಯ ಕುಮಾರ್, ಅಬ್ದುಲ್ ಅಜೀಜ್, ರೋಷನ್ ಶೆಟ್ಟಿ, ವಿಶ್ವಾಸ್ ಅಮೀನ್, ಕೇಶವ ಕ್ಯೋಟ್ಯಾನ್, ಬಾಲಕೃಷ್ಣ ಪೂಜಾರಿ, ಕಿಶೋರ್ ಕುಮಾರ್, ಸತೀಶ್ ಕೊಡವೂರು, ನಾಗೇಶ್ ಕುಮಾರ್ ಉದ್ಯಾವರ, ದಿಲೀಪ್ ಹೆಗ್ಗಡೆ, ದಿವಾಕರ್ ಕುಂದರ್, ಇಸ್ಮಾಯಿಲ್ ಅತ್ರಾಡಿ ಮೊದಲಾದವರು ಉಪಸ್ಥಿತರಿದ್ಧರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಸ್ತಾವಿಕವಾಗಿ ಮಾತನಾಡಿದರು. ಕುಂದಾಪುರ ಬ್ಲಾಕ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ರಾಜು ಪೂಜಾರಿ ವಂದಿಸಿದರು. ಭಾಸ್ಕರ ರಾವ್ ಕಿದಿಯೂರು ಹಾಗೂ ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News