ಸಾಲಬಾಧೆ: ಮಹಿಳೆ ಆತ್ಮಹತ್ಯೆ
Update: 2023-09-22 21:17 IST

ಬ್ರಹ್ಮಾವರ, ಸೆ.22: ಸಾಲಬಾಧೆಯಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕೆಂಜೂರಿನ ಉಷಾ(42) ಎಂದು ಗುರುತಿಸಲಾಗಿದೆ. ಇವರು ತಾನು ಹಾಗೂ ಗಂಡ ಮಾಡಿದ ಸಾಲ ಭಾದೆ ಯಿಂದ ಮತ್ತು ಮಕ್ಕಳ ವಿದ್ಯಾಭ್ಯಾಸದ ಖರ್ಚು ವೆಚ್ಚದಿಂದ ಜೀವನ ನಿರ್ವಹಿಸಲು ಕಷ್ಟವಾಗುತ್ತಿರುವ ಬಗ್ಗೆ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.14ರಂದು ಇಲಿ ಪಾಶಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ತೀವ್ರವಾಗಿ ಅಸ್ವಸ್ಥ ಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸೆ.22ರಂದು ಮಧ್ಯಾಹ್ನ ಬ್ರಹ್ಮಾವರ ಖಾಸಗಿ ಆಸ್ಪತ್ರೆ ಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.