ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

Update: 2023-07-28 16:03 GMT

ಉಡುಪಿ: ಜನಾಂಗೀಯ ಸಂಘರ್ಷ ಹಾಗೂ ಮಾನಭಂಗ, ಅತ್ಯಾಚಾರ ಹಾಗೂ ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿರುವ ಅಲ್ಲಿನ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿ ಗೊಳಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ಜಿಲ್ಲಾ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಈಶಾನ್ಯ ರಾಜ್ಯವಾದ ಮಣಿಪುರ ಕಳೆದ ಮೂರು ತಿಂಗಳಿನಿಂದ ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿದೆ. ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಗುಂಪೊಂದು ಲೈಂಗಿಕ ದೌರ್ಜನ್ಯ ನಡೆಸಿರುವುದನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದು ಖಂಡನೀಯ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಆಕ್ರೋಶ ವ್ಯಕ್ತಪಡಿಸಿದರು.

ಇಷ್ಟೆಲ್ಲಾ ಘಟನೆ ನಡೆದಿದ್ದರೂ ಸಹ ವಿಶ್ವಗುರು ಎಂದು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರೇಕೆ ಮೌನವಹಿಸಿದ್ದಾರೆ ಎನ್ನುವುದು ದೇಶಕ್ಕೆ ಅಪಮಾನ ಎಂದರು. ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಸಲ್ಯಾನ್, ಗುಣವಂತ ತೊಟ್ಟಂ, ಪ್ರಸಾದ್ ನೆರ್ಗಿ, ಮಾಜಿ ನಗರಸಭಾ ಸದಸ್ಯ ನಾರಾಯಣ ಕುಂದರ್, ಸುಶೀಲ್ ಕುಮಾರ್ ಕೊಡವೂರು, ದಲಿತ ಮುಖಂಡ ಗಣೇಶ್ ನೆರ್ಗಿ, ನವೀನ್ ಬನ್ನಂಜೆ, ದಯಾನಂದ ಕಪ್ಪೆಟ್ಟು, ದಿನೇಶ್ ಜವನರಕಟ್ಟೆ, ಸಂತೋಷ್ ಕೆ.ರಾಜೇಶ್ ಕೆಮ್ಮಣ್ಣು ಮುಂತಾದವರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News