ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಕರೆಯಲು ಆಗ್ರಹ

Update: 2023-10-28 15:36 GMT

ಉಡುಪಿ, ಅ.28: ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಸುಮಾರು 5 ತಿಂಗಳು ಕಳೆದರೂ ಈವರೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಯದೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಬಹುತೇಕ ಸ್ಥಗಿತಗೊಂಡಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆರೋಪಿಸಿದ್ದಾರೆ.

ವಿವಿಧ ಇಲಾಖೆಗಳ ಹಲವಾರು ಯೋಜನೆಗಳ ಅನುದಾನ ಬಿಡುಗಡೆ ಯಾಗದೇ ಅತಂತ್ರವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿ ರುವುದರಿಂದ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅನಾನು ಕೂಲ ವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರವನ್ನು ಪುನರ್ ಪರಿಶೀಲಿಸಿ ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News