ಧನುಷ್ ಶಾಸ್ತ್ರಿಗೆ ರಾಜ್ಯಮಟ್ಟದ ಉತ್ತಮ ವಿದ್ಯಾರ್ಥಿ ಪ್ರಶಸ್ತಿ
Update: 2025-03-29 21:44 IST

ಉಡುಪಿ: ಬಂಟಕಲ್ ಶ್ರೀಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಅಂತಿಮ ವರ್ಷದ ಗಣಕ ಯಂತ್ರ ವಿಭಾಗದ ವಿದ್ಯಾರ್ಥಿ ಧನುಶ್ ಶಾಸ್ತ್ರಿ ಐಎಸ್‌ಟಿಇ ಕರ್ನಾಟಕ ರಾಜ್ಯ ವಿಭಾಗದ 2024-25ನೇ ಸಾಲಿನ ಉತ್ತಮ ವಿದ್ಯಾರ್ಥಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯು ಕಾಲೇಜಿನ ಐಎಸ್‌ಟಿಇ ವಿದ್ಯಾರ್ಥಿ ಘಟಕದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿ ಕೊಂಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಕರ್ನಾಟಕ ಐಎಸ್‌ಟಿಇ ವತಿಯಿಂದ ನೀಡಲಾಗಿದೆ. ಬೆಂಗಳೂರು ನ್ಯೂ ಹೊರಿ ಝೊನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾ.28ರಂದು ನಡೆದ 20ನೇ ಕರ್ನಾಟಕ ರಾಜ್ಯ ಮಟ್ಟದ ಐಎಸ್‌ಟಿಇ ವಿದ್ಯಾರ್ಥಿ ಸಮಾವೇಶದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.