ಸುಸ್ಥಿರ ಅಭಿವೃದ್ಧಿಗೆ ಡಿಜಿಟಲ್ ಬಳಕೆ ಅತಿ ಮುಖ್ಯ: ಉಡುಪಿ ಜಿಲ್ಲಾಧಿಕಾರಿ

Update: 2024-08-12 14:20 GMT

ಉಡುಪಿ, ಆ.12: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಕ್ರಾಂತಿ ನಮ್ಮ ಬದುಕನ್ನು ಆವರಿಸಿಕೊಂಡಿದೆ. ಡಿಜಿಟಲ್ ಬಳಕೆಯಿಂದ ಉಂಟಾಗುವ ಧನಾತ್ಮಕ ಹಾಗೂ ಋಣಾತ್ಮಕ ಪರಿಣಾಮಗಳನ್ನು ಎಲ್ಲರೂ ಅರಿತು ಕೊಂಡಿರ ಬೇಕು. ಸುಸ್ಥಿರ ಅಭಿವೃದ್ಧಿ ಯಲ್ಲಿ ಡಿಜಿಟಲ್ ಬಳಕೆಗೆ ಬಹು ಮುಖ್ಯ ಪಾತ್ರ ವಿದ್ದು, ಡಿಜಿಟಲ್ ಬಳಕೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರತಿಯೊಬ್ಬರೂ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಹೇಳಿದ್ದಾರೆ.

ಮಣಿಪಾಲದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೋಟರಿ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಹಾಗೂ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಅನಂತ ನಗರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಯುವ ದಿನಾಚರಣೆ, ಎಚ್‌ಐವಿ/ಏಡ್ಸ್ ಅರಿವಿನ ಮಾಸಾಚರಣೆ ಮತ್ತು ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಯುವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಯುವ ಪೀಳಿಗೆ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವ ಹಿಸುವ ಮೂಲಕ ಕಾರ್ಯಕ್ರಮದಲ್ಲಿ ದೊರಕುವ ಮಾಹಿತಿಗಳನ್ನು ಪಡೆದುಕೊಂಡು ಅವುಗಳ ಪ್ರಯೋಜನ ಪಡೆದುಕೊಳ್ಳ ಬೇಕು ಎಂದರು.

ಏಡ್ಸ್ ರೋಗ ಹರಡುವಿಕೆ, ಅವುಗಳ ಲಕ್ಷಣಗಳ ಬಗ್ಗೆ ಅರಿವು ಹೊಂದಿ ಎಚ್ಚರ ವಹಿಸಿದಾಗ ಮಾತ್ರ ಈ ರೋಗದಿಂದ ದೂರವಿರಲು ಸಾಧ್ಯ. ಯುವಜನತೆ ಏಡ್ಸ್ ಕಾಯಿಲೆಗೆ ತುತ್ತಾಗುತ್ತಿರುವುದನ್ನು ನಾವು ಕಾಣುತಿದ್ದೇವೆ. ಒಮ್ಮೆ ಎಚ್‌ಐವಿ ತಗುಲಿದರೆ, ಅದರ ಸಮಸ್ಯೆಯನ್ನು ಜೀವನ ಪಯಾರ್ಂತ ಎದುರಿಸುವುದರೊಂದಿಗೆ ಅದರ ಜೊತೆಗೆ ಬದುಕಬೇಕಾಗು ತ್ತದೆ. ಆದ್ದರಿಂದ ಕಾಯಿಲೆ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವುದರೊಂದಿಗೆ ಪ್ರತಿಯೊಬ್ಬ ರಲ್ಲೂ ಈ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ರಕ್ತದಾನ ಎಲ್ಲಾ ದಾನಕ್ಕಿಂತ ಶ್ರೇಷ್ಠ ದಾನವಾಗಿದ್ದು, ಅಪಘಾತ ಹಾಗೂ ಇತರೆ ಕಾಯಿಲೆಗಳ ಕಾರಣದಿಂದ ಸಾವನಪ್ಪುವ ಒಬ್ಬ ವ್ಯಕ್ತಿಯ ಜೀವವನ್ನು ಕಾಪಾಡುವಲ್ಲಿ ರಕ್ತದಾನವು ಪ್ರಮುಖ ಪರಾತ್ರ ವಹಿಸುತ್ತದೆ. ಯುವಜನತೆ ರಕ್ತದಾನದಂತಹ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ಅನುಷ್ಠಾನ ಅಧಿಕಾರಿ ಡಾ.ಚಿದಾನಂದ ಸಂಜು ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ಸರಕಾರ ಜನರಿಗೆ ಎಚ್‌ಐವಿ, ಏಡ್ಸ್ ಹಾಗೂ ಆರೋಗ್ಯ ಸಂಬಂಧಿತ ವಿಷಯಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಶಾಲಾ ಕಾಲೇಜುಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಪ್ರತಿ ಯೊಬ್ಬರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ಪಡೆದು ಕೊಂಡು ತಮ್ಮ ಕುಟುಂಬಕ್ಕೂ ಸಮುದಾಯಕ್ಕೂ ತಿಳಿಸಬೇಕು ಎಂದರು.

ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲೆ ಸಹನಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ನಶಾ ಮುಕ್ತ ಭಾರತದ ಪ್ರತಿಜ್ಞಾ ವಿಧಿ ಬೋಧಿಸಿದರು. ಎಚ್‌ಐವಿ, ಏಡ್ಸ್ ಕುರಿತು ಗೂಗಲ್ ಆನ್‌ಲೈನ್ ಲಿಂಕ್ ಮೂಲಕ ನಡೆಸಿದ ಇ-ಕ್ವಿಜ್ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ, ರೋಟರಿ ಅಧ್ಯಕ್ಷ ಟಿ. ಗುರುರಾಜ ಭಟ್, ಲಯನ್ಸ್ ಕ್ಲಬ್‌ನ ಅಧ್ಯಕ್ಷ ರಘುನಾಥ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕಿ ವಂದನಾ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮೇಲ್ವಿಚಾರಕ ಮಹಾಬಲೇಶ್ವರ ನಿರೂಪಿಸಿದರು. ಶಿವಪ್ರಸಾದ್ ವಂದಿಸಿದರು.



Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News