ಮನೋವೈದ್ಯರ ಹುದ್ದೆಗೆ ನೇರ ಸಂದರ್ಶನ

Update: 2023-08-08 14:27 GMT

ಉಡುಪಿ, ಆ.8: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ- ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿ ಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಮನೋವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆಗಸ್ಟ್ 14ರಂದು ಬೆಳಗ್ಗೆ 10:30ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಮನೋವೈದ್ಯ ಶಾಸ್ತ್ರದಲ್ಲಿ ಎಂಬಿಬಿಎಸ್ ಮತ್ತು ಎಂಡಿ ಪದವಿ ಅಥವಾ ಮನೋವೈದ್ಯ ಶಾಸ್ತ್ರದಲ್ಲಿ ಡಿಎನ್‌ಬಿ ಪದವಿ ಅಥವಾ ಎಂಸಿಐನಿಂದ ಗುರುತಿಸಲ್ಪಟ್ಟ ಸಂಸ್ಥೆಯಿಂದ ಡಿಪಿಎಮ್ ಪದವಿ ಹೊಂದಿರುವ ಹಾಗೂ ಯಾವುದೇ ಆಸ್ಪತ್ರೆಯಲ್ಲಿ ಮನೋವೈದ್ಯರಾಗಿ 2 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಹಾಜರಾಗಬಹುದು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News