ಉಡುಪಿ: ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

Update: 2023-08-21 15:27 GMT

ಉಡುಪಿ, ಆ.21: ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳು -2 ಹುದ್ದೆ (ನಮ್ಮ ಕ್ಲಿನಿಕ್ ಟಿ.ಟಿ ರೋಡ್ ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಸಾರ್ವಜನಿಕ ಆಸ್ಪತ್ರೆ), ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ಇನ್‌ಸ್ಪೆಕ್ಟರ್- ಯಂಗ್ ಹಿಯರಿಂಗ್ ಇಂಪೈರಿಡ್ ಚಿಲ್ಡ್ರನ್ (ಜಿಲ್ಲಾ ಆಸ್ಪತ್ರೆ) ಹಾಗೂ ನಗರ ಆರೋಗ್ಯ ಕೇಂದ್ರದಲ್ಲಿ ಎಲ್‌ಹೆಚ್‌ವಿ ತಲಾ 1 ಹುದ್ದೆ ಮತ್ತು ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕರ-3 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳಿಗೆ ಆಗಸ್ಟ್ 28ರಂದು ಬೆಳಗ್ಗೆ 10:30ಕ್ಕೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲಾತಿ ಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕು.ಕ. ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News