ಆ.25ರಂದು ನೇರ ಸಂದರ್ಶನ

Update: 2023-08-22 15:37 GMT

ಉಡುಪಿ, ಆ.22: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 25ರಂದು ಬೆಳಗ್ಗೆ 10:30ಕ್ಕೆ ನಗರದ ಬನ್ನಂಜೆ ರೋಡ್ ಶ್ರೀರಾಮ್ ಬಿಲ್ಡಿಂಗ್ 2ನೇ ಮಹಡಿಯ ಮಹೀಂದ್ರ ರೂರಲ್ ಹೌಸಿಂಗ್ ಪ್ರೈ ಲಿ. ಇಲ್ಲಿ ನೇರ ಸಂದರ್ಶನ ನಡೆಯಲಿದೆ.

ಎಸೆಸೆಲ್ಸಿ, ಪಿಯುಸಿ, ಐಟಿಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ- ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News