ಆ.28ರಂದು ನೇರ ಸಂದರ್ಶನ
Update: 2024-08-26 14:55 GMT
ಉಡುಪಿ, ಆ.26: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಆಗಸ್ಟ್ 28 ರಂದು ಬೆಳಗ್ಗೆ 10:30ಕ್ಕೆ ಕಾರ್ಪೊರೇಶನ್ ಬ್ಯಾಂಕ್ ರೋಡ್‌ನ ಅನುರಾಗ ಕಾಂಪ್ಲೆಕ್ಸ್‌ನಲ್ಲಿರುವ ಶಾಂತ ಎಲೆಕ್ಟ್ರಿಕಲ್ಸ್‌ನಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.