ರಾ.ಹೆದ್ದಾರಿ ಸಮಸ್ಯೆಗಳ ಬಗ್ಗೆ ಶೀಘ್ರವೇ ಚರ್ಚೆ: ಉಡುಪಿ ಜಿಲ್ಲಾಧಿಕಾರಿ

Update: 2023-08-04 15:18 GMT

ಉಡುಪಿ: ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿ ಗಳೊಂದಿಗೆ ಶೀಘ್ರದಲ್ಲಿಯೇ ಸಭೆ ಕರೆಯ ಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದರು.

ಮಣಿಪಾಲದ ತಮ್ಮ ಕಚೇರಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಜಿಲ್ಲೆ ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚಿಸಿ, ನಿಗದಿತ ಅವಧಿಯೊಳಗೆ ಪರಿಹರಿಸಲು ಸೂಚನೆ ನೀಡಲಾಗುವುದು ಎಂದು ಡಾ.ಕೆ. ವಿದ್ಯಾಕುಮಾರಿ ಹೇಳಿದರು.

ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆ ಬಳಿಯ ಸಮಸ್ಯೆ, ಉಡುಪಿ- ಮಣಿಪಾಲ ಹೆದ್ದಾರಿಯಲ್ಲಿ ಬೀದಿ ದೀಪ ವ್ಯವಸ್ಥೆ, ರೈಲ್ವೆ ಬ್ರಿಜ್ ಹಾಗೂ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಸಿಗ್ನಲ್ ಅಳವಡಿಕೆ ಕುರಿತಂತೆ ಆ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗುವುದು ಮತ್ತು ಸಂಬಂಧಪಟ್ಟ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡ ಲಾಗುವುದು ಎಂದರು.

ಬಿಆರ್ ಆಸ್ಪತ್ರೆ ಸಮಸ್ಯೆ: ಉಡುಪಿಯ ಡಾ.ಬಿ.ಆರ್.ಶೆಟ್ಟಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಸಿಬ್ಬಂದಿಗಳ ಕೊರತೆ, ಇರುವ ಸಿಬ್ಬಂದಿಗಳಿಗೆ ವೇತನ ಸಮಸ್ಯೆ ಪರಿಹರಿಸಲು ಪ್ರಯತ್ನಗಳು ಸಾಗಿವೆ. ೨೦೧೮ರಲ್ಲಿ ಅಲ್ಲಿದ್ದ ೩೪ ಮಂದಿ ಎನ್‌ಆರ್‌ಎಚ್ ಸಿಬ್ಬಂದಿಗಳನ್ನು ವಿವಿಧ ಪಿಎಚ್‌ಸಿ ಹಾಗೂ ಕುಂದಾಪುರ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಇದೀಗ ಅವ ರನ್ನು ವಾಪಾಸು ಕರೆಸುವ ಅಥವಾ ಹೊಸದಾಗಿ ನೇಮಕ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದರು.

ಇಲ್ಲಿನ ಸಮಸ್ಯೆಗಳ ಕುರಿತಂತೆ ಮೊನ್ನೆ ಮುಖ್ಯಮಂತ್ರಿಗಳ ಗಮನವನ್ನು ಸೆಳೆಯಲಾಗಿದೆ. ಹಣಕಾಸು ಇಲಾಖೆಯೊಂದಿಗೆ ಮಾತನಾಡುವ ಭರವಸೆ ನೀಡಿದ್ದಾರೆ. ಈ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ವಿವರಿಸಲು ಅಧಿಕಾರಿ ಯೊಬ್ಬರು ಬೆಂಗಳೂರಿಗೆ ತೆರಳಿದ್ದಾರೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News