ಪಡುಬಿದ್ರಿ ಬ್ಲೂಫ್ಲ್ಯಾಗ್ ಬೀಚ್‌ನಲ್ಲಿ ವಾಟರ್‌ ಸ್ಪೋರ್ಟ್ಸ್ ಪ್ರಾರಂಭಕ್ಕೆ ಚರ್ಚೆ: ಬೀಚ್ ನಿರ್ವಹಣಾ ಸಮಿತಿ ಸಭೆ

Update: 2023-10-19 16:40 GMT

ಉಡುಪಿ, ಅ.19: ಪಡುಬಿದ್ರಿಯ ಬ್ಲೂ ಫ್ಲ್ಯಾಗ್ ಬೀಚ್ ನಿರ್ವಹಣಾ ಸಮಿತಿ ಸಭೆ ಬುಧವಾರ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಬ್ಲೂ ಫ್ಲಾಗ್ ಬೀಚ್‌ನಲ್ಲಿ ಕಸ ವಿಲೇವಾರಿ ಸ್ವಚ್ಛತೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಬಗ್ಗೆ ಹಾಗೂ ಸಮರ್ಪಕ ವಾದ ಶುಲ್ಕ ವಸೂಲಾತಿ ಬಗ್ಗೆ ಸಮಾಲೋಚನೆ ನಡೆಯಿತು. ಅಲ್ಲದೇ ಇದರಲ್ಲಿ ವಿವಿಧ ವಾಟರ್ ಸ್ಪೋರ್ಟ್ಸ್ ಚಟುವಟಿಕೆ ಆರಂಭಿಸುವ ಬಗ್ಗೆಯೂ ಚರ್ಚೆ ನಡೆಯಿತು.

ಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ಕರಾವಳಿ ಪ್ರವಾಸೋದ್ಯಮ ಸಂಘಟನೆ ಅಧ್ಯಕ್ಷರಾದ ಮನೋಹರ ಶೆಟ್ಟಿ, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News