ಆ.18ರಿಂದ ಉಡುಪಿ ಜಿಲ್ಲೆಯ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ

Update: 2023-08-17 15:55 GMT

ಸಾಂದರ್ಭಿಕ ಚಿತ್ರ

ಉಡುಪಿ, ಆ.17: ಪಿ.ಎಂ.ಪೋಷಣ್-ಅಕ್ಷರ ದಾಸೋಹ ಕಾರ್ಯಕ್ರಮದಡಿ ಶಾಲಾ ಮಕ್ಕಳ ಅಪೌಷ್ಠಿಕತೆ ನಿವಾರಣೆಗಾಗಿ ಜಿಲ್ಲೆಯ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳ 1ನೇ ತರಗತಿ ಯಿಂದ 10ನೇ ತರಗತಿಯ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ವಿತರಿಸುವಂತೆ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ ಎಂದು ಡಿಡಿಪಿಐ ಗಣಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರಂತೆ ಉಡುಪಿ ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ, ಬೈಂದೂರು ಹಾಗೂ ಕಾರ್ಕಳ ವಲಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆಯನ್ನು, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ವಿತರಿಸಲಾಗುತ್ತದೆ ಎಂದವರು ವಿವರಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ಆ.18ರಂದು ಸಾಂಕೇತಿಕವಾಗಿ ಚಾಲನೆ ನೀಡಲಾಗುತ್ತದೆ. ಜಿಲ್ಲೆಯ ಎಲ್ಲಾ ಸರಕಾರಿ ಹಾಗೂ ಅನುದಾನಿತ ಫಲಾನುಭವಿ ಶಾಲೆಗಳಲ್ಲಿ ಸ್ಥಳೀಯ ಶಾಸಕರು ಅಥವಾ ಜನಪ್ರತಿನಿಧಿಗಳು ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News