ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ದೇಣಿಗೆ

Update: 2023-10-14 12:17 GMT

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸ್ಥಾಪಿಸಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಉಡುಪಿಯ ಸಿಎಸ್‌ಐ ಲೋಂಬಾರ್ಡ್ ಮೆಮೊರಿಯಲ್(ಮಿಷನ್) ಆಸ್ಪತ್ರೆಯ ವತಿಯಿಂದ ಶನಿವಾರ ದೇಣಿಗೆ ನೀಡಲಾಯಿತು.

ಆಸ್ಪತ್ರೆಯ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅವರಿಗೆ ಚೆಕ್ ಹಸ್ತಾಂತರಿ ಸಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಪತ್ರಿಕಾ ಭವನದ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News