ಕಸ್ತೂರಿ ರಂಗನ್ ವರದಿ ಅನುಷ್ಠಾನದಲ್ಲಿ ಆತುರ ಬೇಡ: ಸುನಿಲ್ ಕುಮಾರ್

Update: 2023-07-30 14:58 GMT

ಉಡುಪಿ, ಜು.30: ಕಸ್ತೂರಿ ರಂಗನ್ ವರದಿಯನ್ನು ಯಥಾವತ್ ಅನುಷ್ಠಾನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆಯವರು ನೀಡಿರುವ ಹೇಳಿಕೆ ಕಳವಳಕ್ಕೆ ಕಾರಣವಾಗಿದ್ದು, ಸರಕಾರ ಈ ವಿಚಾರದಲ್ಲಿ ಆತುರದ ನಿರ್ಣಯ ಕೈಗೊಳ್ಳಬಾರದು ಎಂದು ಮಾಜಿ ಸಚಿವ ವಿ.ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

ಈ ವರದಿಯ ಯಥಾವತ್ ಜಾರಿಯಿಂದ ಪಶ್ಚಿಮಘಟ್ಟ ವ್ಯಾಪ್ತಿಯ ಜ ಜೀವನಕ್ಕೆ ಸಮಸ್ಯೆಯಾಗುತ್ತದೆ. ಅರಣ್ಯಾಶ್ರಿತ ಜನರ ಬದುಕು ಹೈರಾಣಾಗುತ್ತದೆ. ಹೀಗಾಗಿ ಕಸ್ತೂರಿ ರಂಗನ್ ವರದಿ ಯಥಾವತ್ ಜಾರಿ ಅವೈಜ್ಞಾನಿಕವಷ್ಟೇ ಅಲ್ಲ, ಅಮಾನವೀಯವೂ ಆಗಿರುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ವರದಿ ಜಾರಿ ಬಗ್ಗೆ ಕೇಂದ್ರಕ್ಕೆ ವರದಿ ಕಳುಹಿಸುವುದಕ್ಕೆ ಮುನ್ನ ಇನ್ನಷ್ಟು ಚರ್ಚೆಯ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಯೋಜನಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಶಾಸಕರ ಸಭೆ ಕರೆದು ಚರ್ಚಿಸಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News