ಡಾ.ಶಿವರಾಮ ಕಾರಂತ ಜನ್ಮದಿನೋತ್ಸವ ‘ಇಂಪನ-2023’ಕ್ಕೆ ಚಾಲನೆ

Update: 2023-10-03 15:56 GMT

ಕೋಟ, ಅ.3: ಡಾ.ಶಿವರಾಮ ಕಾರಂತರ ವ್ಯಕ್ತಿತ್ವ ವಿಶಿಷ್ಟವಾದುದು. ಕಾರಂತರು ಕಾರ್ಯ ಸಾಧನೆಯ ಮೂಲಕ ಜಗತ್ತನ್ನು ಸ್ಪರ್ಶಿಸಿದ್ದಾರೆ. ಕಾರಂತರು ಸಾಹಿತಿ ಎಂಬುದಕ್ಕಿಂತ ಸಾಮಾಜಿಕ ಹೋರಾಟಗಾರ ಎಂಬುದು ಮುಖ್ಯ ಎಂದು ಕುಂದಾಪುರದ ಶಾಸಕ ಕಿರಣ್ ಕಮಾರ್ ಕೊಡ್ಗಿ ಹೇಳಿದ್ದಾರೆ.

ಕೋಟತಟ್ಟು ಗ್ರಾಮ ಪಂಚಾಯತ್, ಉಡುಪಿ ಡಾ.ಶಿವರಾಮ ಕಾರಂತ ಟ್ರಸ್ಟ್, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಆಶ್ರಯದಲ್ಲಿ ಮಂಗಳವಾರ ಕೋಟದ ಡಾ.ಕಾರಂತ ಥೀಂ ಪಾರ್ಕ್‌ನಲ್ಲಿ ಆಯೋಜಿಸಲಾದ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವ ‘ಇಂಪನ -2023’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕಾರಂತರೆಂದರೆ ನೇರ ನಿಷ್ಟುರವಾದಿ. ಅವರಂತೆ ಬದುಕು ಕಾಣಲು ಯಾರಿಗೂ ಸಾಧ್ಯವಿಲ್ಲ. ವಿವಿಧ ಕ್ಷೇತ್ರದಲ್ಲಿ ಕೈಯಾಡಿಸಿ ಯಶಸ್ಸು ಕಂಡ ಶ್ರೇಷ್ಠ ವ್ಯಕ್ತಿತ್ವ ಅವರದ್ದು. ಬಹು ಸಂಸ್ಕ್ರತಿಯ ನಮ್ಮ ದೇಶದಲ್ಲಿ ಕಾರಂತರ ಕೊಡುಗೆ ಅನನ್ಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗಾಂಧಿ ಪುರಸ್ಕಾರ ಪಡೆದ ಬ್ರಹ್ಮಾವರದ ಕೋಡಿ, ಕುಂದಾಪುರ ಶಂಕರನಾರಾಯಣ, ಹೊಸಾಡು, ಕಾರ್ಕಳದ ನೀರೆ, ಬೈಂದೂರಿನ ಕಾಲ್ತೋಡು, ಉಡುಪಿಯ ಅಲೆವೂರು, ಹೆಬ್ರಿ ಮಡಾಮಕ್ಕಿ ಮತ್ತು ಬೆಳ್ಳೆ ಗ್ರಾಪಂ ಗಳನ್ನು ವಿಶೇಷವಾಗಿ ಗೌರವಿಸಲಾಯಿತು. ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಪಂ ಅಧ್ಯಕ್ಷ ಸತೀಶ್ ಕುಂದರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕ.ಸಾ.ಪ ಉಡುಪಿ ಜಿಲ್ಲಾಧ್ಯಕ್ಷ ನಿಲಾವರ ಸುರೇಂದ್ರ ಅಡಿಗ, ಬ್ರಹ್ಮಾವರ ತಾಪಂ ಕಾರ್ಯನಿರ್ವಹಣಾಧಿಕಾರಿ ಎಚ್.ವಿ. ಇಬ್ರಾಹಿಂಪುರ ಉಪಸ್ಥಿತರಿದ್ದರು.

ಕಾರಂತ ಹುಟ್ಟೂರ ಪ್ರಶಸ್ತಿಯ ರೂವಾರಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಕನ್ನಡ ಸಂಸ್ಕ್ರತಿ ಇಲಾಖೆಯ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಕೋಟತಟ್ಟು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ವಂದಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News