ಮಣಿಪಾಲ: ಡಾ.ವೇಣುಗೋಪಾಲ್ ನಿಧನ

Update: 2023-07-31 03:41 GMT

ಉಡುಪಿ, ಜು.31: ಖ್ಯಾತ ಮೂತ್ರಶಾಸ್ತ್ರಜ್ಞ ಮತ್ತು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಸಂಸ್ಥಾಪಕ ಡಾ ವೇಣುಗೋಪಾಲ್ ಇಂದು ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಇವರು ಪ್ರಸಕ್ತ ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಡಾ.ಆನಂದ್ ವೇಣುಗೋಪಾಲ್ ಅವರ ತಂದೆ.

ಕಸ್ತೂರ್ಬಾ ಆಸ್ಪತ್ರೆ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಮೂತ್ರಶಾಸ್ತ್ರ ವಿಭಾಗಕ್ಕೆ ಅವರು ಸುದೀರ್ಘ ಸೇವೆಯ ಸಲ್ಲಿಸಿದ್ದರು.

ಡಾ.ವೇಣುಗೋಪಾಲ್ ನಿಧನಕ್ಕೆ ಕೆಎಂಸಿ ಆಸ್ಪತ್ರೆ ಹಾಗೂ ಕಾಲೇಜಿನ ಪರವಾಗಿ ಸಂತಾಪ ವ್ಯಕ್ತಪಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News