ತೆಂಕನಿಡಿಯೂರು ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ

Update: 2024-09-10 15:51 GMT

ಉಡುಪಿ, ಸೆ.10: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜ ಕಾರ್ಯ ವೇದಿಕೆ ಮತ್ತು ಎನ್ನೆಸ್ಸೆಸ್ ಅಲ್ಲದೇ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಉಡುಪಿ ಇವುಗಳ ಆಶ್ರಯದಲ್ಲಿ ನಶಾ ಮುಕ್ತ ಅಭಿಯಾನ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಮನೋವೈದ್ಯ ಭಾಗವಹಿಸಿ ನಶಾ ಮುಕ್ತ ಭಾರತ ಅಭಿಯಾನ ಮತ್ತು ಪ್ರಸ್ತುತ ಉಡುಪಿ ಜಿಲ್ಲೆಯನ್ನು ನಶಾ ಮುಕ್ತ ಮಾಡುವ ಬಗ್ಗೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಸುರೇಶ್ ರೈ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿ ಕಾರಿ ರತ್ನ, ನಶಾ ಮುಕ್ತ ಭಾರತ ಅಭಿಯಾನದ ರಾಜ್ಯ ಸಂಯೋಜನಾಧಿಕಾರಿಗಳಾದ ಜಯಗೋಲ, ಅಕ್ಷರ ಯಾದವ್, ಯೋಜನೆಯ ಸಂಯೋಜನಾಧಿಕಾರಿ ಶಿವಾಜಿ ಎ.ಕೆ., ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ (ಪದವಿ) ಮಮತಾ, ಮತ್ತು ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಸುಷ್ಮಾ ಟಿ. ಉಪಸ್ಥಿತರಿದ್ದರು.

ಕಾಲೇಜಿನ ಬಿಎಸ್‌ಡಬ್ಲ್ಯೂ ವಿದ್ಯಾರ್ಥಿನಿ ಲವಿಟಾ ಮಥಾಯಸ್ ಸ್ವಾಗತಿಸಿದರೆ, ಓಶಿಯನ್ ಬಾರಾ ವಂದಿಸಿದರು. ರಿಯೋನಾ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News