ಡಿಎಸ್‌ಟಿ-ಪಿಹೆಚ್‌ಡಿ ಶಿಷ್ಯವೇತನ: ಅರ್ಜಿ ಆಹ್ವಾನ

Update: 2023-10-05 13:53 GMT

ಉಡುಪಿ : ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ವಿಜ್ಞಾನ ಮತ್ತು ಇಂಜಿನಿಯರಿಂಗ್‌ನಲ್ಲಿ ಪಿಹೆಚ್‌ಡಿ ಸಂಶೋಧನೆಗೆ ಕರ್ನಾಟಕ ಡಿಎಸ್‌ಟಿ-ಪಿಹೆಚ್‌ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮೂಲಕ ಅನುಷ್ಠಾನಗೊಳಿಸಿದೆ.

ಪ್ರಸಕ್ತ ಸಾಲಿನಲ್ಲಿ ಸದರಿ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ರಾಜ್ಯದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ ಅಥವಾ ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್‌ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ ೩೦ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಮಾಹಿತಿಗೆ ವೆಬ್‌ಸೈಟ್ - http://ksteps.karnataka.gov.in- ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News