ಸೆ.17ರಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಬ್ರಹ್ಮಾವರಕ್ಕೆ ಭೇಟಿ
Update: 2023-09-16 13:37 GMT
ಉಡುಪಿ, ಸೆ.16: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಸೆ.17ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 10:30ಕ್ಕೆ ಬ್ರಹ್ಮಾವರದ ಶ್ರೀನಾರಾಯಣ ಗುರು ರಂಗಮಂದಿರದಲ್ಲಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಚಿವರು ಬಳಿಕ ತೀರ್ಥಹಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.