ಏಕಲವ್ಯ ಪ್ರಶಸ್ತಿ: ಅರ್ಜಿ ಆಹ್ವಾನ
Update: 2023-10-30 14:20 GMT
ಉಡುಪಿ, ಅ.30: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ಪ್ರದರ್ಶಿಸಿದ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2020ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತಾವನೆಗಳನ್ನು ಸಲ್ಲಿಸಲು ನವೆಂಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820- 2521324, ಮೊ.ನಂ: 9480886467 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.