ರಾಜ್ಯಾಧ್ಯಕ್ಷರ ಆಯ್ಕೆಯಿಂದ ಬಿಜೆಪಿಯಲ್ಲಿ ನೈಜ ಕುಟುಂಬ ರಾಜಕಾರಣ ಸಾಬೀತು: ರಮೇಶ್ ಕಾಂಚನ್

Update: 2023-11-11 13:16 GMT

ಉಡುಪಿ: ಕುಟುಂಬ ರಾಜಕಾರಣದ ಬಗ್ಗೆ ಉದ್ದುದ್ದ ಭಾಷಣ ಮಾಡುತ್ತಿದ್ದ ಬಿಜೆಪಿಗರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಮೂಲಕ ನೈಜ ಕುಟುಂಬ ರಾಜಕಾರಣ ಯಾವ ಪಕ್ಷದಲ್ಲಿದೆ ಎನ್ನುವುದನ್ನು ಸಾಬೀತು ಪಡಿಸಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷ ಕುಟುಂಬ ರಾಜಕಾರಣದ ಪಿತಾಮಹ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಟೀಕಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದು 6 ತಿಂಗಳು ಕಳೆದರೂ ಕೂಡ ಸೂಕ್ತ ವಿಪಕ್ಷ ನಾಯಕನನ್ನು ನೇಮಿಸಲು ಬಿಜೆಪಿಯ ದೆಹಲಿ ನಾಯಕರಿಗೆ ಸಾಧ್ಯ ವಾಗಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಹಲವು ಘಟಾನುಘಟಿಗಳ ಹೆಸರು ಕೇಳಿಬಂದರೂ ಕೂಡ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪಅವರ ಬೆದರಿಕೆಗೆ ಮಣಿದು ಅವರ ಪುತ್ರನನ್ನೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿರು ವುದು ಕುಟುಂಬ ರಾಜಕಾರಣವಲ್ಲದೇ ಮತ್ತೇನು? ಎಂದು ಅವರು ಪ್ರಶ್ನಿಸಿದ್ದಾರೆ.

ಈಗಾಗಲೇ ಕುಟುಂಬ ರಾಜಕಾರಣವನ್ನೇ ಮಾಡಿಕೊಂಡು ಕೌಟಂಬಿಕ ಪಕ್ಷವಾಗಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿ ಕೊಂಡಿರುವ ಬಿಜೆಪಿ ಕೂಡ ತನ್ನ ಪಕ್ಷವನ್ನು ಮುಂದಿನ ದಿನಗಳಲ್ಲಿ ಕೌಟಂಬಿಕ ಪಕ್ಷವೆಂದು ಹೆಸರು ಬದಲಾಯಿಸಿಕೊಳ್ಳ ಬೇಕಾಗುವ ಪರಿಸ್ಥಿತಿ ಬರುವ ಲಕ್ಷಣಗಳು ಕಾಣುತ್ತಿವೆ. ಮುಂದಿನ ದಿನಗಳಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು ಅದರ ಮೊದಲಾದರೂ ಒರ್ವ ಸಮರ್ಥ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ಗಟ್ಟಿತನವನ್ನು ಬಿಜೆಪಿ ನಾಯಕರು ತೋರಿ ಸಲಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News