ಮಕ್ಕಳಿಗೆ ಯಕ್ಷಗಾನ ಕಲಿಸುವ ಸಂಘಸಂಸ್ಥೆಗಳಿಗೆ ಉತ್ತೇಜನ: ಡಾ.ತಲ್ಲೂರು ಶಿವರಾಮ ಶೆಟ್ಟಿ

Update: 2024-10-23 12:19 GMT

ಉಡುಪಿ: ಯಕ್ಷಗಾನಕ್ಕೆ ಕೊಡುಗೆ ನೀಡುತ್ತಿರುವ ಸಂಘಸಟಸ್ಥೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಕಾರ್ಯ ಮಾಡಲಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಮಕ್ಕಳಿಗೆ ಯಕ್ಷಗಾನವನ್ನು ಕಲಿಸುವ ಸಂಘಸಂಸ್ಥೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಈ ಮೂಲಕ ಯಕ್ಷಗಾನ ಕಲೆಯ ಉಳಿವು ಬೆಳವಣಿಗೆ ನಿರಾಂತಕವಾಗಿ ನಡೆಯಬೇಕೇನ್ನುವುದೇ ಅಕಾಡೆಮಿಯ ಹೆಬ್ಬಯಕೆ ಯಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.

ಬ್ರಹ್ಮಾವರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ಅಜಪುರ ಕರ್ನಾಟಕ ಸಂಘದ ೬೯ನೇ ವರ್ಷದ ನಾಡಹಬ್ಬದಲ್ಲಿ ಭಾಗವಹಿಸಿ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡುತಿದ್ದರು.

ಅಜಪುರ ಕರ್ನಾಟಕ ಸಂಘದ ಅಧ್ಯಕ್ಷ ಎಚ್.ನಿತ್ಯಾನಂದ ಶೆಟ್ಟಿ ಮಾತನಾಡಿ, ಸಾತ್ವಿಕ ಮನೋಭಾವವನ್ನು ಬೆಳೆಸಿಕೊಂಡು ಧನಾತ್ಮಕ ಚಿಂತನೆ ಬೆಳೆಸಿಕೊಂಡು ಈ ಸಂಘವನ್ನು ಹುಟ್ಟುಹಾಕಿದ್ದಾರೆ. ಮಾನವ ಉನ್ನತ ಆದರ್ಶಗಳನ್ನು ಬೆಳೆಸಿಕೊಂಡು ಬೆಳೆದರೆ ಆತನ ಬದುಕು ಸಾರ್ಥಕವೆನಿಸುತ್ತದೆ ಎಂದರು.

ಉದ್ಯಮಿ ಚೇತನ್ ಕುಮಾರ್ ಶೆಟ್ಟಿ, ಬಿಎಸ್‌ಎನ್‌ಎಲ್ ನಿವೃತ್ತ ಮಹಾ ಪ್ರಬಂಧಕ ಎಂ.ಚಂದ್ರಶೇಖರ ಕಲ್ಕೂರ ಮಾತನಾಡಿದರು. ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಅವರಿಗೆ ಸುವರ್ಣ ನಿಧಿ ಸನ್ಮಾನದೊಂದಿಗೆ ಗೌರವಿಸಲಾಯಿತು. ಕೃಷ್ಣಸ್ವಾಮಿ ಜೋಯಿಸ ಅವರಿಗೆ ಅಜಪುರ ಯಕ್ಷ ಪುರಸ್ಕಾರ ಪ್ರದಾನ ಮಾಡಲಾಯಿತು. ಬಳಿಕ ಜಾಂಬವತಿ ಕಲ್ಯಾಣ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ಸಂಪನ್ನಗೊಂಡಿತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News