ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ಕರ್ವಾಲು ದೇವಸ್ಥಾನಕ್ಕೆ ಭೇಟಿ
Update: 2025-03-18 12:21 IST

ಕಾರ್ಕಳ : ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್, ವೀಕ್ಷಕ ವಿವರಣೆಗಾರ, ಮಾಜಿ ಕಪ್ತಾನ ರವಿಶಾಸ್ತ್ರಿ ತಮ್ಮ ಕುಟುಂಬದ ಮೂಲ ಸ್ಥಾನ ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬೈಲೂರು ಎರ್ಲಪಾಡಿ ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಅನಂತ ಪಟ್ಟಾಭಿ ರಾವ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಭೋಜ ಶೆಟ್ಟಿ, ಪ್ರಮುಖರಾದ ಸಂದೀಪ್ ಶೆಟ್ಟಿ, ಸುಧಾಕರ ಹೆಗ್ಡೆ, ಪ್ರಶಾಂತ್ ಶೆಟ್ಟಿ, ದಿಲೀಪ್ ಶೆಟ್ಟಿ, ತಂತ್ರಿಗಳಾದ ವರದರಾಜ್ ತಂತ್ರಿ, ಹರಿಶ್ಚಂದ್ರ ರಾವ್, ರವಿಶಾಸ್ತಿ್ರ ಕುಟುಂಬಸ್ಥರಾದ ವಾದಿರಾಜ ಪೆಜತ್ತಾಯ ಉಪಸ್ಥಿತರಿದ್ದರು.
ಸದ್ರಿ ದೇವಸ್ಥಾನದ ನವೀಕರಣ ಕಾರ್ಯನಡೆಯುತ್ತಿದ್ದು, ದೇವಸ್ಥಾನದ ರಸ್ತೆಯಲ್ಲಿ ಸ್ವಾಗತ ಗೋಪುರ ಕಟ್ಟಸಿಕೊಡುಮಂತೆ ಮನವಿ ಮಾಡಲಾಯಿತು.