ಸೆ.10ರಂದು ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ, ಸೆ.7: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ- ಕರಾವಳಿ ಶಾಖೆ, ಜಿಲ್ಲಾಸ್ಪತ್ರೆ ಎನ್‌ಸಿಡಿ ವಿಭಾಗ, ಜಿಲ್ಲಾ ಸರ್ವೇಕ್ಷಣ ಘಟಕ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ, ಸಮುದಾಯ ವೈದ್ಯಕೀಯ ವಿಭಾಗ ಕೆಎಂಸಿ ಮಣಿಪಾಲ, ದಂತ ವೈದ್ಯಕೀಯ ವಿಭಾಗ ಕೆಎಂಸಿ ಮಣಿಪಾಲ ಮತ್ತು ಉಡುಪಿ ಪ್ರಸಾದ್ ನೇತ್ರಾಲಯದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸೆ.10ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ಗಂಟೆಯವರೆಗೆ ಉಡುಪಿ ಐಎಂಎ ಭವನದಲ್ಲಿ ಏರ್ಪಡಿಸಲಾಗಿದೆ.
ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗ ಭೂಷಣ ಉಡುಪ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಐಎಂಎ ಉಡುಪಿ ಕರಾವಳಿ ಅಧ್ಯಕ್ಷ ಡಾ.ಪಿ.ವಿ.ಭಂಡಾರಿ ವಹಿಸಲಿರುವರು.
ಶಿಬಿರದಲ್ಲಿ ಮಧುಮೇಹ ರಕ್ತ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ಇಸಿಜಿ ಪರೀಕ್ಷೆ, ಕಣ್ಣಿನ ಪರೀಕ್ಷೆ, ದಂತ ಪರೀಕ್ಷೆ, ಚರ್ಮರೋಗ ತಪಾಸಣೆ, ಕಿವಿ ಗಂಟಲು ಮೂಗು ತಪಾಸಣೆ, ಅಸಾಂಕ್ರಾಮಿಕ ರೋಗಗಳ ಬಗ್ಗೆ ಆಪ್ತ ಸಮಾಲೋಚನೆ ನಡೆಸಲಾಗುತ್ತದೆ. ಇದರಲ್ಲಿ ವೈದ್ಯಕೀಯ ತಜ್ಞರು, ಮಧುಮೇಹ ತಜ್ಞರು, ಇಎನ್‌ಟಿ ತಜ್ಞರು, ನೇತ್ರ ತಜ್ಞರು, ಚರ್ಮರೋಗ ತಜ್ಞರು, ಡೆಂಟಿಸ್ಟ್ ಭಾಗವಹಿಸಲಿರವರು ಎಂದು ಐಎಂಎ ಉಡುಪಿ- ಕರಾವಳಿ ಕಾರ್ಯದರ್ಶಿ ಡಾ.ಕೇಶವ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.