ತಾಲೂಕು ಸಮ್ಮೇಳನಗಳಿಗೆ ಅನುದಾನ ಸ್ಥಗಿತಗೊಳಿಸಿಲ್ಲ: ಸಚಿವ ತಂಗಡಗಿ

Update: 2023-12-13 13:05 GMT

ಉಡುಪಿ: ತಾಲೂಕು ಸಮ್ಮೇಳನಗಳಿಗೆ ನೀಡುವ ಅನುದಾನವನ್ನು ಸ್ಥಗಿತಗೊಳಿಸಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಿ ಕಾರ್ಯಗತ ಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಖಾತೆ ಸಚಿವ ಶಿವರಾಜ್ ಸಂಗಪ್ಪ ತಂಗಡಗಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕದ ವತಿಯಿಂದ ಡಿ.೩೦ರಂದು ಮಣಿಪಾಲದ ಶಿವಪ್ಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿರುವ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಭಿತ್ತಿಚಿತ್ರವನ್ನು ಬೆಳಗಾವಿಯ ಸುವರ್ಣ ಸೌಧದ ಸಚಿವರ ಕಚೇರಿಯಲ್ಲಿ ಬುಧವಾರ ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ಮತ್ತು ಜಿಲ್ಲಾ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News