ಮೃತನ ಕುಟುಂಬಸ್ಥರು ನೀಡುವ ದೂರಿನಂತೆ ಮುಂದಿನ ಕ್ರಮ: ಉಡುಪಿ ಜಿಲ್ಲಾ ಎಸ್ಪಿ ಡಾ.ಅರುಣ್

Update: 2024-11-10 06:35 GMT

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕೇರಳ ಮೂಲದ ವ್ಯಕ್ತಿಯ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಮೃತರ ಮನೆಯವರಿಗೆ ಮಾಹಿತಿ ನೀಡಲಾಗಿದೆ. ಕೇರಳದಿಂದ ಆಗಮಿಸುತ್ತಿರುವ ಮೃತರ ಕುಟುಂಬಸ್ಥರು ಮುಂದೆ ನೀಡುವ ದೂರನ್ನು ಆಧರಿಸಿ ಕ್ರಮ ಜರುಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಇದೊಂದು ಲಾಕಪ್ ಡೆತ್ ಪ್ರಕರಣ ಆಗಿರುವುದರಿಂದ ಇದರ ತನಿಖೆಯನ್ನು ಸಿಐಡಿ ವಹಿಸಿಕೊಳ್ಳಲಿದೆ. ಮರಣೋತ್ತರ ಪರೀಕ್ಷೆಯನ್ನು ಎರಡು ತಂಡಗಳು ನೆರವೇರಿಸಲಿದ್ದು, ಅದರ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗುವುದು. ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಹಿಳೆ ಹಾಗೂ ಮಕ್ಕಳಿಗೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಆರೋಪಿ ಕೇರಳ ರಾಜ್ಯದ ಕೊಲ್ಲಂ ಮೂಲದ ಬಿಜು ಮೋಹನ್ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅದರಂತೆ ಆತನನ್ನು ವಿಚಾರಣೆಗಾಗಿ ಠಾಣೆಗೆ ಕರೆತಂದು ಠಾಣೆಯ ಲಾಕಪ್ ನಲ್ಲಿ ಇರಿಸಲಾಗಿತ್ತು. ನಸುಕಿನ ವೇಳೆ ಲಾಕಪ್ ನಲ್ಲೇ ಆತ ಮೃತಪಟ್ಟಿರುವುದು ಕಂಡುಬಂದಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News