ಗೂಡ್ಸ್ ಟೆಂಪೊ ಢಿಕ್ಕಿ: ಪಾದಚಾರಿ ಮೃತ್ಯು
Update: 2024-10-01 17:33 GMT
ಕಾರ್ಕಳ, ಅ.1: ಗೂಡ್ಸ್ ಟೆಂಪೊ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತು ಕೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೆ.30ರಂದು ಸಂಜೆ 6.45ರ ಸುಮಾರಿಗೆ ನಡೆದಿದೆ.
ಮೃತರನ್ನು ವಸಂತ(65) ಎಂದು ಗುರುತಿಸಲಾಗಿದೆ. ಇವರು ಕಾರ್ಕಳದಿಂದ ಬಸ್ಸಿನಲ್ಲಿ ಬಂದು ಇಳಿದು ರಸ್ತೆ ದಾಟಲು ರಸ್ತೆ ಬದಿ ನಿಂತುಕೊಂಡಿದ್ದರು. ಈ ವೇಳೆ ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಗೂಡ್ಸ್ ಟೆಂಪೋ ವಸಂತ ಅವರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ಅವರು, ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.