ಪೈಪೋಟಿ ಮಧ್ಯೆ ಸರಕಾರಿ ಶಾಲೆ ಉಳಿಸುವುದು ಅಗತ್ಯ: ಕಿರಣ್ ಕೊಡ್ಗಿ

Update: 2023-10-07 12:59 GMT

ಕುಂದಾಪುರ, ಅ.7: ಖಾಸಗಿ ಶಾಲೆಗಳ ಪೈಪೋಟಿ ನಡುವೆ ಸರಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಜವಬ್ದಾರಿ ನಮ್ಮ ದಾಗಿದೆ. ಸರಕಾರಿ ಕನ್ನಡ ಶಾಲೆಗಳ ಉಳಿವಿಗೆ ಊರಿನವರ ಕೊಡುಗೆ ಬಹಳಷ್ಟಿದೆ. ಖಾಸಗಿಯವರೊಂದಿಗೆ ಪೈಪೋಟಿಗಿಳಿ ಯಲು ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುವಂತಾ ಗಬೇಕು ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ.

ಆನಗಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ನೂತನ ವಿವೇಕ ತರಗತಿ ಕೋಣೆಗಳನ್ನು ಉದ್ಘಾಟಿಸಿ ಅವರು ಮಾತನಾ ಡಿದರು. ಪೋಷಕರು ಅಂಗನ ವಾಡಿ ಮಟ್ಟದಲ್ಲಿಯೇ ಮಕ್ಕಳನ್ನು ಸರಕಾರಿ ಕನ್ನಡ ಶಾಲೆಗೆ ಕಳಿಸುವ ಇಚ್ಛಾಶಕ್ತಿ ತೋರಬೇಕು ಎಂದರು.

ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸುರೇಶ್ ಬಿಲ್ಲವ ಅಧ್ಯಕ್ಷತೆ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಧರ್ ಶೆಟ್ಟಿ, ಕುಂದಾಪುರ ವಲಯ ಶಾಲಾ ಸಂಪನ್ಮೂಲ ವ್ಯಕ್ತಿ ಸಂತೋಷ್ ಶೆಟ್ಟಿ, ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಲಿಂಗಪ್ಪ, ನಿವೃತ್ತ ಶಿಕ್ಷಕ ಸಂಕಯ್ಯ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಗಿರೀಶ್ ಗಾಣಿಗ ಸ್ವಾಗತಿಸಿದರು. ಪೋಷಕ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಅಂಬಿಕಾ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News