ರಾಜ್ಯಪಾಲರಿಗೆ ಉಡುಪಿ ಬಿಜೆಪಿ ನಿಯೋಗದಿಂದ ಗೌರವ

Update: 2023-10-10 13:17 GMT

ಉಡುಪಿ : ಕೋಟ ಶಿವರಾಮ ಕಾರಂತರ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಗೆ ಇಂದು ಆಗಮಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಉಡುಪಿ ಬಿಜೆಪಿ ನಿಯೋಗದಿಂದ ಗೌರವ ಸಲ್ಲಿಸಲಾಯಿತು.

ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಲಾಡಿ ಸುರೇಶ್ ನಾಯಕ್ ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಶಾಸಕರುಗಳಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ ಗಂಟಿಹೊಳೆ, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಪ್ರಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ ಶೆಟ್ಟಿ, ಜಿಲ್ಲಾ ಬಿಜೆಪಿ ವಕ್ತಾರರಾದ ಕೆ ರಾಘವೇಂದ್ರ ಕಿಣಿ, ಪೂರ್ಣಿಮಾ ಸುರೇಶ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News