ಹಿಟ್ ಆ್ಯಂಡ್ ರನ್: ಪಾದಚಾರಿ ಮೃತ್ಯು
Update: 2023-11-15 17:22 GMT
ಕಾಪು, ನ.15: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.14ರಂದು ರಾತ್ರಿ ವೇಲೆ ಕಟಪಾಡಿಯ ಭಾಗ್ಯಲಕ್ಷ್ಮೀ ಗ್ರಾನೈಟ್ಸ್ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ.
ಮೃತರನ್ನು ಇನ್ನಂಜೆಯ ಉತ್ತಮ (33) ಎಂದು ಗುರುತಿಸಲಾಗಿದೆ. ಪೇಟಿಂಗ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಇವರು, ರಸ್ತೆಯನ್ನು ದಾಟಲು ರಸ್ತೆ ಬದಿ ನಿಂತುಕೊಂಡಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗು ತ್ತಿದ್ದ ಕಾರು ಇವರಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಯಿತ್ತೆ ನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಉತ್ತಮ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.