ಹೊಸ್ಮಾರ್ ಅಬ್ದುರ್ರಹ್ಮಾನ್ ಮುಸ್ಲಿಯಾರ್ ನಿಧನ
Update: 2023-10-15 10:48 GMT
ಕಾರ್ಕಳ: ಹೊಸ್ಮಾರ್ ನಿವಾಸಿ ಅಬ್ದುರ್ರಹ್ಮಾನ್ ಮುಸ್ಲಿಯಾರ್ ರವಿವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಉಡುಪಿ ಜಿಲ್ಲಾ ಸುನ್ನೀ ಸಂಘಟನೆಗಳ ಸಕ್ರಿಯ ಕಾರ್ಯಕರ್ತರಾಗಿದ್ದ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಅವರು, ವೇಣೂರು ಹಿದಾಯತುಲ್ ಇಸ್ಲಾಮ್ ಮದ್ರಸದ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದರು.
ಇಂದು ಬೆಳಿಗ್ಗೆ ಸ್ಟ್ರೋಕ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯ ಆಸ್ಪತ್ರೆ ಕರೆದೊಯ್ಯಲಾಗಿತ್ತು. ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿರುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಹಲವು ಸುನ್ನೀ ಇಸ್ಲಾಮಿಕ್ ಸಂಘಟನೆಗಳ ನೇತೃತ್ವ ವಹಿಸಿದ್ದ ಅವರು ಉಡುಪಿ ಜಿಲ್ಲೆಯಲ್ಲಿ ಧಾರ್ಮಿಕ ಸೇವೆಯ ನೀಡುವುದರ ಜೊತೆಗೆ ಜನಪ್ರಿಯರಾಗಿದ್ದರು.
ಮೃತರು ತಾಯಿ, ಪತ್ನಿ, ಮಕ್ಕಳು, ಮೂವರು ಸಹೋದರರರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.