ಪ್ರಜಾಪ್ರಭುತ್ವ ದಿನಾಚರಣೆ ಮಾನವ ಸರಪಳಿಯಲ್ಲಿ ಎಲ್ಲರೂ ಕೈಜೋಡಿಸಿ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

Update: 2024-09-06 14:37 GMT

ಉಡುಪಿ, ಸೆ.6: ರಾಜ್ಯ ಸರಕಾರ ಇದೇ ಸೆ.15ರ ಪ್ರಜಾಪ್ರಭುತ್ವ ದಿನವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದು, ಇದರ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತ್ತಿದೆ. ಇದರಲ್ಲಿ ಜಿಲ್ಲೆಯ ಪ್ರತಿಯೊಬ್ಬರು ಭಾಗವಹಿಸಿ ಸಂಭ್ರಮಿಸಿ ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ತಿಳಿಸಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಮಾನವ ಸರವಳಿ ಆಯೋಜಿಸುವ ಕುರಿತ ಎರಡನೇ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಬೀದರದಿಂದ ಚಾಮರಾಜನಗರದವರೆಗೆ ಏಕಕಾಲಕ್ಕೆ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ರೂಪಿ ಸುವ ಮೂಲಕ ಪ್ರಜಾಪ್ರಭುತ್ವದ ಏಕತೆ, ಸದೃಡತೆ, ಸಾಮರಸ್ಯ ಸಾರುವ ಸಂಕೇತವಾಗಿ ಮಾನವ ಸರಪಳಿ ರೂಪಿಸಲಾ ಗುತ್ತಿದೆ. ಜಿಲ್ಲೆಯ ಎಲ್ಲರೂ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದವರು ಕರೆ ನೀಡಿದರು.

ಜಿಲ್ಲೆಯ 100ಕಿ.ಮೀ ಮಾರ್ಗದಲ್ಲಿ ಮಾನವ ಸರಪಳಿ ನಿರ್ಮಿಸಲಾ ಗುತ್ತದೆ. ಪ್ರತಿ ಕಿ.ಮೀ.ಗೆ ನೇಮಿಸುವ ನೊಡಲ್ ಅಧಿಕಾರಿ ಯೋಜಿತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.

ಜನಪ್ರತಿನಿದಿನಗಳು, ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳು, ಸ್ವ-ಸಹಾಯ ಸಂಘಗಳ ಸದಸ್ಯರು, ಪದಾಧಿಕಾರಿಗಳ ಸಹಕಾರದೊಂದಿಗೆ ಇಲಾಖೆಗಳ ಅಧಿಕಾರಿಗಳು ಸಮನ್ವಯ ಹೊಂದಿ ಕಾರ್ಯ ನಿರ್ವಹಿಸಬೇಕು. ಅದಕ್ಕೆ ಬೇಕಾದ ಎಲ್ಲಾ ಅಗತ್ಯ ಸಿದ್ದತೆಗಳನ್ನು ಈಗಿನಿಂದಲೇ ಮಾಡಿಕೊಳ್ಳುವ ಮೂಲಕ ಅಂತಾ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಯನ್ನು ಯಶಸ್ವಿಗೊಳಿಸಲು ಜಿಲ್ಲೆಯ ಸಮಸ್ತ ನಾಗರೀಕರು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಮಾನವ ಸರಪಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಕರ್ನಾಟಕ ಸರಕಾರದಿಂದ ಪ್ರಶಂಸ ಪತ್ರಕ್ಕೆ ಅರ್ಹರಾಗುತ್ತಾರೆ. ತಮ್ಮಹೆಸರನ್ನು ಆನ್‌ಲೈನ್ ಮೂಲಕ -  http://www.democracydaykarnataka.in/registration - ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿಯಲ್ಲಿ ಭಾಗವಹಿಸುವವರು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಸರಕಾರದಿಂದ ವಿಶೇಷವಾಗಿ ವೆಬ್‌ಪೇಜ್ ಅನ್ನು ಅಭಿವೃದ್ಧಿ ಪಡಿಸಿದ್ದು, ಸದ್ರಿ ವೆಬ್‌ಪೇಜ್‌ ನಲ್ಲಿ ವೈಯಕ್ತಿಕ, ಸಂಘಸಂಸ್ಥೆ ಹಾಗೂ ಯಾತ್ರಿ ಗಳು ಎಂಬ ಮೂರು ವಿಧದಲ್ಲಿ ನೋಂದಣಿ ಮಾಡಿಕೊಳ್ಳ ಬಹುದಾಗಿದೆ. ನೋಂದಣಿ ಸಂದರ್ಭದಲ್ಲಿ ತಮ್ಮ ಫೋಟೋ ಅಪ್ಲೋಡ್ ಮಾಡಿದ್ದಲ್ಲಿ ತಮ್ಮ ಫೋಟೋ ಸಮೇತ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ ಎಂದರು.

ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಜನರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ನಿಯೋಜಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಬೇಕು ಎಂದು ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಎಎಸ್ಪಿ ಟಿ. ಸಿದ್ಧಲಿಂಗಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಟಾನಾಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News