ಬೆಳ್ಮ ಣ್ ವೃತ್ತ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಉದ್ಘಾಟನೆ

Update: 2024-10-05 08:10 GMT

ಕಾರ್ಕಳ:ಬೆಳ್ಮ ಣ್ ವೃತ್ತ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಉದ್ಘಾಟನೆ. ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ನೈತಿಕ ಮೌಲ್ಯ ಹಾಗೂ ಕ್ರೀಡಾ ಸ್ಪೂರ್ತಿಯನ್ನು ಚಿಕ್ಕ ಪ್ರಾಯದಲ್ಲಿ ಅಳವಡಿಸಿಕೊಂಡಾಗ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ವಿನ ಹಾದಿಯಲ್ಲಿ ಸಾಗಲು ಸಾಧ್ಯ ಎಂದು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುರೇಂದ್ರ ಶೆಟ್ಟಿ ಕೋರಿಬೆಟ್ಟುಗುತ್ತು ಹೇಳಿದರು.

ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡ್ಕೂರು ಇವರ ಪ್ರಾಯೋಜಕತ್ವದಲ್ಲಿ ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ವೃತ್ತ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತಾ ಶೆಟ್ಟಿ ಕ್ರೀಡಾ ಜ್ಯೋತಿ ಉದ್ಘಾಟಿಸಿ ಮಾತನಾಡಿ ಮಕ್ಕಳು ಸಮುದಾಯದ ಆಸ್ತಿ ಶಿಕ್ಷಣದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.

ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಉಮಾಧರ ಆಚಾರ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಎಂ.ಜಿ

ಕರ್ಕೆರ,ನಮ್ಮ ಫ್ರೆಂಡ್ಸ್ ಅಧ್ಯಕ್ಷ ಅರುಣ್ ರಾವ್, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಸದಾಶಿವ ಶೆಟ್ಟಿ ಬೋಳ,ಉದ್ಯಮಿ ಅಶೋಕ್ ಶೆಟ್ಟಿ ಪದ್ಮಸಧನ, ನಿವೃತ್ತ ಗ್ರಾಮಕರಣಿಕ ಅವಿಲ್ ಡಿಸೋಜಾ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ, ಮುಂಡ್ಕೂರು ಲಯನ್ಸ ಕ್ಲಬ್ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಾಲತೇಶ್ ಇಂಗಳಕಿ, ಶಾಲಾ ಅಭಿವೃದ್ಧಿ ಸಮಿತಿಯ ಕೋಶಾಧಿಕಾರಿ ಪ್ರಭಾಕರ್ ಶೆಟ್ಟಿ ಗಾರ್, ಮುಖ್ಯ ಶಿಕ್ಷಕಿ ಸವಿತಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ವೀಣಾ ಕಾಮತ್ , ಮುಂಡ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್ ಶೆಟ್ಟಿ ಶಿಕ್ಷಣ ಸಂಯೋಜಕ ಚಂದ್ರಕಾಂತ್ ಡೇಸಾ,ದೈಹಿಕ ಶಿಕ್ಷಕಿ ಮಮತಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು ಸ. ಹಿ. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರ ರಂಗಸ್ವಾಮಿ ಸ್ವಾಗತಿಸಿ, ಶಿಕ್ಷಕ ಶ್ರೀಕಾಂತ್ ಧನ್ಯವಾದವಿತ್ತರು .

ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ಕಾಲೇಜಿನ ಶಿಕ್ಷಕ ಪ್ರಭಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಸಂತ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News