ಕರಕುಶಲ ವಸ್ತುಗಳ ಪ್ರದರ್ಶನ, ಮಾರಾಟ ಮೇಳ ಉದ್ಘಾಟನೆ

Update: 2024-08-23 16:05 GMT

ಉಡುಪಿ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ, ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇವರ ಆಶಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವ ಪ್ರಯುಕ್ತ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಗೀತಾಮಂದಿರದಲ್ಲಿ ಚಾಲನೆ ನೀಡಲಾಯಿತು.

ಬಳಿಕ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರು ಹಾಗೂ ಕಿರಿಯ ಯತಿಗಳಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಉದ್ಯಮಿಗಳಾದ ಹರಿಪ್ರಸಾದ್ಕ ರೈ, ಭುವನೇಂದ್ರ ಕಿದಿಯೂರು, ಸುರೇಂದ್ರ ಕಲ್ಯಾಣಪುರ್, ಪ್ರದೀಪ್ ಕಲ್ಕೂರ, ಪ್ರೇಮ್ ಮಿನೇಜಸ್, ಕಟಪಾಡಿ ಕಾಳಿಕಾಂಬಾ ದೇವಸ್ಥಾನದ ಧರ್ಮದರ್ಶಿ ಮುರಹರಿ ಆಚಾರ್ಯ, ಮಠದ ದಿವಾನರಾದ ನಾಗ ರಾಜ ಆಚಾರ್ಯ, ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ತಾಲೂಕು ವ್ಯವಸ್ಥಾಪಕಿ ಸುಜಾತಾ, ಪ್ರಶಾಂತ್, ಸವಿತಾ, ಬಬೀತಾ ಹಾಗೂ ಸಂಜೀವಿನಿ ಸ್ವಸಹಾಯ ಸಂಘಗಳ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

ಆ.31ರವರೆಗೆ ನಡೆಯುವ ಈ ವಸ್ತು ಪ್ರದರ್ಶನದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಂಜೀವಿನಿ ಮಹಿಳೆಯರ 23 ಮಳಿಗೆಗಳಿದ್ದು ಈ ಮಳಿಗೆಗಳಲ್ಲಿ ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಹ್ಯಾಂಡ್ ಮೇಡ್ ಬ್ಯಾಗ್, ಬಿದಿರಿನ ಬುಟ್ಟಿ, ತೆಂಗಿನ ಚಿಪ್ಪಿನ ವಿವಿಧ ಕಲಾಕೃತಿಗಳು, ಅಲಂಕಾರಿಕ ಹೂವಿನ ಗಿಡಗಳು, ಗೊಂಬೆಗಳು, ಕೈಮಗ್ಗ ಸೀರೆ, ಇತ್ಯಾದಿ ವಸ್ತುಗಳು ಲಭ್ಯವಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News