ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ
ಕಲ್ಯಾಣಪುರ, ಅ.24: ಸ್ಥಳೀಯ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಇಲ್ಲಿನ ಟ್ರೈಸೆಂಟಿನರಿ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.
ಮುಖ್ಯ ಅತಿಥಿಯಾಗಿ ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಭಾಗವಹಿಸಿ ಮಾತನಾಡಿ, ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮುಖ್ಯವಾ ದುದು. ಸಮಾಜದ ಪರಿವರ್ತನೆ ಹಾಗೂ ಬೆಳವಣಿಗೆಗಾಗಿ ನಾಯಕತ್ವ ಗುಣಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಮತ್ತು ಇದು ಪ್ರದರ್ಶನಕ್ಕಾಗಿ ಆಗಿರಬಾರದು ಎಂದು ತಿಳಿಸಿದರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು ಪ್ರಸ್ತುತ ಕಲ್ಯಾಣಪುರ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿರುವ ನಾಗರಾಜ ಕುಂದರ್‌ರನ್ನು ಈ ಸಂದರ್ಭ ದಲ್ಲಿ ಸನ್ಮಾನಿಸಲಾಯಿತು. ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್ ಆಳ್ವ ಅವರು ವಿದ್ಯಾರ್ಥಿ ಸಂಘದ ಅಧ್ಯಕ್ಷ ಶೆನ್‌ರೋಯ್ ಡಯಾಸ್ ಹಾಗೂ ಇತರ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ತರಗತಿ ಪ್ರತಿನಿಧಿಗಳು ಶೆನ್‌ರೋಯ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕ ಅತಿ ವಂದನೀಯ ಫಾ. ವಲೇರಿಯನ್ ಮೆಂಡೊನ್ಸಾ ವಹಿಸಿದ್ದರು. ವಿದ್ಯಾರ್ಥಿ ಸಂಘದ ನಿರ್ದೇಶಕ ಕಾರ್ತಿಕ್ ನಾಯಕ್ ಸ್ವಾಗತಿಸಿದರು. ಡಾ. ಹರಿಣಾಕ್ಷಿ ಎಂ.ಡಿ. ಸನ್ಮಾನಿತರನ್ನು ಪರಿಚಯಿಸಿದರು. ಐಕ್ಯೂಎಸಿ ಘಟಕದ ನಿರ್ದೇಶಕ ಡಾ. ಜಯರಾಮ್ ಶೆಟ್ಟಿಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅನನ್ಯ ಭಟ್ ವಂದಿಸಿ ಶ್ರೇಯಾ ಮತ್ತು ಶಾನ್ ಡಯಾಸ್ ಕಾರ್ಯಕ್ರಮ ನಿರೂಪಿಸಿದರು.