ದಿವ್ಯಾಂಗರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಶಿಬಿರ ಉದ್ಘಾಟನೆ

Update: 2023-10-12 13:11 GMT

ಉಡುಪಿ : ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ಉಡುಪಿ ಹಾಗೂ ಎಪಿಡಿ ಸಂಸ್ಥೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ನಡೆದ ದಿವ್ಯಾಂಗರ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಉದ್ಯೋಗ ಶಿಬಿರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ದಿವ್ಯಾಂಗರಿಗೆ ಸ್ವಾವಲಂಬಿ ಜೀವನಕ್ಕೆ ದಾರಿ ದೀಪವಾಗುವ ಮಾರ್ಗದರ್ಶನ ನೀಡಿ, ರೆಡ್‌ಕ್ರಾಸ್ ಸಂಸ್ಥೆಯ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವಿವಿಧ ಯೋಜನೆಗಳ ಕುರಿತು ತಿಳಿಸಿದರು.

ಜಿಲ್ಲಾ ಯೋಜನಾ ಸಂಯೋಜಕ ಹರೀಶ್ ಶೆಟ್ಟಿ ಆಜ್ರಿ ಪ್ರಾಸ್ತಾವಿಕವಾಗಿ ಮಾತನಾಡಿ, ಕೌಶಲ್ಯಾಭಿವೃದ್ಧಿ ತರಬೇತಿಯ ಉದ್ದೇಶ, ಚಟುವಟಿಕೆಗಳನ್ನು ಹಾಗೂ ನೇಮಕಾತಿ ಪ್ರಕ್ರಿಯೆ ಕುರಿತು ವಿವರಿಸಿದರು. ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿ ಸಿದ್ದ ಆಕಾಶ ಶೆಟ್ಟಿ ಅಂಪಾರು, ಆರ್‌ಪಿಡಬ್ಲ್ಯೂಡಿ ಆಕ್ಟ್ -೨೦೧೬ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಪಿಡಿ ಸಂಸ್ಥೆಯ ನಿರ್ದೇಶಕ ಮಹೇಶ್ ಕೆ, ನಿರಂಜನ್ ಟಿ, ಗುಲಪ್ಪ, ಸುಪ್ರೀತಾ, ಶ್ರೀಧರ್, ಜಿಲ್ಲೆಯ ದಿವ್ಯಾಂಗರು, ಉಡುಪಿ ಹಾಗೂ ಕಾರ್ಕಳ ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಎಪಿಡಿ ಸಂಸ್ಥೆಯ ನೇಮಕಾತಿ ಅಧಿಕಾರಿ ಶ್ರೀಧರ್ ಸ್ವಾಗತಿಸಿ, ಡಿಡಿಆರ್‌ಸಿ ನೋಡಲ್ ಅಧಿಕಾರಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಎಪಿಡಿ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ಹರೀಶ್ ಶೆಟ್ಟಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News