ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ವಿವಿಧ ಸಂಘಗಳ ಉದ್ಘಾಟನೆ

Update: 2024-08-24 13:06 GMT

ಕುಂದಾಪುರ : ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಸಂಘದ ಉದ್ಘ್ಘಾಟನಾ ಕಾರ್ಯಕ್ರಮವನ್ನು ಬಿದ್ಕಲ್‌ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ರಾಘವೇಂದ್ರ ಕಿಣಿ ಶನಿವಾರ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯ ವಾಹಿನಿಗೆ ಪರಿಚಯಿಸುವುದರ ಜೊತೆಗೆ ಪಠ್ಯಕ್ರಮ ವನ್ನು ಹೇಗೆ ಅಳವಡಿಸಿ ಕೊಳ್ಳಬೇಕು ಹಾಗೂ ಶೈಕ್ಷಣಿಕವಾಗಿ ಹೇಗೆ ಸಿದ್ಧರಾಗಬೇಕೆಂಬುದನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಕಲಿಕೆಗೆ ಪೂರಕವಾದ ಸ್ವಾತಂತ್ರ್ಯ ಹಾಗೂ ಪರಿಸರ ಬ್ಯಾರೀಸ್ ಸಂಸ್ಥೆಯಲ್ಲಿ ಇದೆ. ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ, ಶಿಸ್ತು, ಸಂಘಟನೆ ಯನ್ನು ಬೆಳೆಸುವಲ್ಲಿ ಕಾಲೇಜು ಪ್ರಯತ್ನಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ವಿದ್ಯಾರ್ಥಿಗಳು ಪಠ್ಯವಸ್ತುವಿಗೆ ಮಾತ್ರ ಸೀಮಿತವಾಗಿರದೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ. ಕೆ.ಎಂ.ಅಬ್ದುಲ್ ರೆಹಮಾನ್ ಬ್ಯಾರಿ ಮಾತನಾಡಿ, ವಿದ್ಯಾರ್ಥಿಗಳು ನಿಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಿ ಎಂದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ.ಶಬೀನಾ ಎಚ್. ಪ್ರಾಸ್ತಾವಿಕವಾಗಿ ಮಾತನಾಡಿದರು.

ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಆಯಿಷಾ ಅಸೀಲ್ ಸ್ವಾಗತಿಸಿದರು. ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಪಂಚಮಿ ಅತಿಥಿ ಗಳನ್ನು ಪರಿಚಯಿಸಿದರು. ದ್ವಿತೀಯ ಗಣಕ ವಿಭಾಗದ ವಿದ್ಯಾರ್ಥಿನಿ ರಫಾತ್ ವಂದಿಸಿದರು. ತೃತೀಯ ಬಿ.ಸಿ.ಎ ವಿಭಾಗದ ವಿದ್ಯಾರ್ಥಿನಿ ಮಿಸ್ಬಾ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News