ಯಕ್ಷಗಾನ ಬಣ್ಣಗಾರಿಕೆ -ವೇಷಗಾರಿಕೆ ಕಾರ್ಯಾಗಾರ ಉದ್ಘಾಟನೆ

Update: 2024-09-16 12:51 GMT

ಉಡುಪಿ, ಸೆ.16: ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಹಮ್ಮಿಕೊಳ್ಳುತ್ತಿರುವ ಪೂರಕ ಕಾರ್ಯಕ್ರಮಗಳು ಪ್ರಶಂಸನೀಯ ಎಂದು ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಹಾಗೂ ಯಕ್ಷಗಾನ ಕಲಾ ಕೇಂದ್ರ ಹಂಗಾರಕಟ್ಟೆ ಗುಂಡ್ಮಿ ಇವರ ಸಹ ಯೋಗದೊಂದಿಗೆ ಗುಂಡ್ಮಿ ಸಾಲಿಗ್ರಾಮದ ಸದಾನಂದ ರಂಗಮಟಟಪದಲ್ಲಿ ಶನಿವಾರ ಹಮ್ಮಿಕೊಳ್ಳಲಾದ 2 ದಿನಗಳ ನಡೆಯುವ ’ಯಕ್ಷಗಾನ ಬಣ್ಣಗಾರಿಕೆ ಮತ್ತು ವೇಷಗಾರಿಕೆ ಕಾರ್ಯಾಗಾರ’ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ವಹಿಸಿದ್ದ ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ಮಕ್ಕಳಿಗೆ ಯಕ್ಷಗಾನ ಕಲೆಯ ಬಗ್ಗೆ ಆಸಕ್ತಿ ಮೂಡಿಸಿ ಭವಿಷ್ಯದ ಕಲಾವಿದರು ಹಾಗೂ ಕಲಾಪ್ರೇಮಿಗಳನ್ನು ರೂಪು ಗೊಳಿಸಬೇಕು. ಕಾಲ, ಕಲಾವಿದರು ಬದಲಾಗಬಹುದು. ಆದರೆ ಕಲೆಯ ಮೂಲ ಬದಲಾವಣೆಯಾಗಬಾರದು. ಅದು ಮೂಲ ಸಂಪ್ರದಾಯ ದಲ್ಲೇ ಉಳಿದು ಬೆಳೆಯಬೇಕು. ಇಂದಿನ ಯುವ ಪೀಳಿಗೆ ಯಕ್ಷಗಾನ, ಭಜನೆಯಂತಹ ಹವ್ಯಾಸಗಳಲ್ಲಿ ತೊಡಗಿಸಿಕೊಂಡರೆ ಸುಸಂಸ್ಕೃತ ಸಮಾಜದ ನಿರ್ಮಾಣ ಸಾಧ್ಯ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಗಣೇಶ್ ಚೇರ್ಕಾಡಿ, ಗಣೇಶ್ ಜನ್ನಾಡಿ, ಮಿಥುನ್ ಬ್ರಹ್ಮಾವರ, ವೈಕುಂಠ ಹೇರ್ಳೆ, ಅಶೋಕ್ ಆಚಾರ್, ಕೂರಾಡಿ ರಾಮ ಬಾಯರಿ, ಶ್ರೀಕಾಂತ ವಡ್ಡರ್ಸೆ, ಸೀತಾರಾಮ ಸೋಮಯಾಜಿ ಹಾಗೂ ವಿಭವನ್ ಗುಂಡ್ಮಿ ಉಪಸ್ಥಿತರಿ ದ್ದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ನಮ್ರತಾ ಎನ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷಗಾನ ಕೇಂದ್ರದ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಹೆಬ್ಬಾರ್ ಸ್ವಾಗತಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News