ವಿವಿಧ ಯೋಜನೆಗಳಿಗೆ ಅರ್ಜಿಗಳ ಆಹ್ವಾನ

Update: 2024-09-20 13:31 GMT

ಉಡುಪಿ : ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆಯಾ ನಿಗಮದ ವ್ಯಾಪ್ತಿ ಯಲ್ಲಿ ಬರುವ ಅರ್ಹ ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳು ವೆಬ್‌ಸೈಟ್ -https://sevasindhu.karnataka.gov.in-ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ ೧೦ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬಿ ಬ್ಲಾಕ್, ಕೊಠಡಿ ಸಂಖ್ಯೆ ೩೦೨, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574884 ಅಥವಾ ನಿಗಮಗಳ ವೆಬ್‌ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್‌ಸಿ/ಎಸ್‌ಟಿ ಸಹಾಯವಾಣಿ 9482300400 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News