ಉಡುಪಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ

Update: 2023-08-28 14:39 GMT

ಉಡುಪಿ, ಆ.28: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಹಾರ ತಂತ್ರಜ್ಞಾನ ಅಥವಾ ಆಹಾರ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ/ ಪದವಿಯನ್ನು ಅಧಿಕೃತ ರಾಷ್ಟ್ರ ಅಥವಾ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯ/ಸಂಸ್ಥೆಗಳಿಂದ ಪಡೆದಿರುವ, ಆಹಾರ ಸಂಸ್ಕರಣಾ ಕೈಗಾರಿಕೆ ಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ ಕುರಿತು 3-5 ವರ್ಷಗಳ ಅನುಭವ ಹೊಂದಿರುವ ಅಥವಾ ಆಹಾರ ತಂತ್ರಜ್ಞಾನ ವಿಷಯದಲ್ಲಿ ಅರ್ಹತೆ ಹೊಂದಿರುವ ವ್ಯಕ್ತಿಗಳು ಲಭ್ಯವಾಗದಿದ್ದಲ್ಲಿ ಆಹಾರ ಸಂಸ್ಕರಣಾ ಕೈಗಾರಿಕೆ, ಬ್ಯಾಂಕಿಂಗ್, ಡಿಪಿಆರ್ ಸಿದ್ಧಪಡಿಸುವಿಕೆ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ಯಾವುದೇ ಪದವಿ ಹೊಂದಿದ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News