ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆ ನಡೆದರೆ ಮಾತ್ರ ಪಕ್ಷದ ಚಟುವಟಿಕೆಯಲ್ಲಿ ಭಾಗಿ: ಯೋಗೀಶ್ ಆಚಾರ್ಯ

Update: 2024-02-07 12:57 GMT

(ಯೋಗೀಶ್ ಆಚಾರ್ಯ)

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ತನಿಖೆ ಪ್ರಾರಂಭವಾಗುವವರೆಗೆ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ನಿರ್ಧಾರ ಮಾಡಿದ್ದೇನೆ. ನನ್ನ ನಿರ್ಧಾರವು ಕಾರ್ಕಳದ ಸಾವಿರಾರು ನಿಷ್ಠಾವಂತ ಕಾರ್ಯಕರ್ತರ ನಿರ್ಧಾರವೂ ಆಗಿದೆ ಎಂದು ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನಾ ತಿಳಿಸಿದ್ದಾರೆ.

ಈ ಕುರಿತು ತನ್ನ ಫೇಸ್‌ಬುಕ್ ಖಾತೆಯಲ್ಲಿ ಫೋಸ್ಟ್ ಹಾಕಿರುವ ಅವರು, ಇದು ಕೇವಲ ನನ್ನೊಬ್ಬನ ನಿರ್ಧಾರವಲ್ಲ. ಇತ್ತೀಚೆಗೆ ಕಾರ್ಕಳ ಬ್ಲಾಕ್ ಸಮಿತಿಯ ಸಭೆಗೆ ಕಾಂಗ್ರೆಸ್ ಪಕ್ಷದ ವೀಕ್ಷಕರಾಗಿ ಕುಶಲ ಶೆಟ್ಟಿ ಅವರು ಆಗಮಿಸಿದ್ದು, ಅವರು ಸೇರಿದಂತೆ ಕಾರ್ಕಳದ ನಾಯಕರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಕಾರ್ಕಳ ಬ್ಲಾಕ್ ಅಧ್ಯಕ್ಷರ ಸಮ್ಮುಖದಲ್ಲೇ ಎಲ್ಲಾ ಕಾರ್ಯಕರ್ತರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದರು ಎಂದು ಹೇಳಿದ್ದಾರೆ.

ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದ್ದು, ಈ ಬಗ್ಗೆ ಆರಂಭದಿಂದಲೂ ಹೋರಾಟ ಮಾಡಿಕೊಂಡು ಬಂದರೂ ಈವರೆಗೆ ತನಿಖೆ ಯಾವ ಹಂತದಲ್ಲಿದೆ ಎಂಬ ಕುರಿತು ಮಾಹಿತಿ ಇಲ್ಲ. ಇದೇ ರೀತಿಯಾದರೆ ನಮ್ಮ ಹೋರಾಟಕ್ಕೆ ಯಾವುದೇ ಬೆಲೆ ಇಲ್ಲದಂತಾಗುತ್ತದೆ. ಆದುದರಿಂದ ತನಿಖೆ ಆರಂಭಿಸುವ ತನಕ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ತಾನು ಸೇರಿ ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತರು ದೂರ ಉಳಿಯಲಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News