ಇಸ್ರೇಲ್ ಯುದ್ಧ: ಉಡುಪಿ ಶಾಸಕರಿಂದ ಬಿಷಪ್ ಭೇಟಿ

Update: 2023-10-13 14:38 GMT

ಉಡುಪಿ, ಅ.13: ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ಉಡುಪಿ ಧರ್ಮ ಪ್ರಾಂತ್ಯದ ಬಿಷಪ್ ಡಾ.ಜೆರಾಲ್ಡ್ ಐಸಾಕ್ ಲೋಬೋ ಅವರನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ಮಾಡಿ ಮಾತುಕತೆ ನಡೆಸಿದರು.

ಕರಾವಳಿ ಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲ್‌ನಲ್ಲಿ ಉದ್ಯೋಗ ದಲ್ಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತ ಸಮುದಾಯ ದವರಾಗಿದ್ದಾರೆ. ಇಸ್ರೇಲ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರಕಾರ ಈಗಾಗಲೇ ಕಾರ್ಯ ಪ್ರವೃತ್ತರಾಗಿದ್ದು, ಆಪರೇಶನ್ ಅಜಯ್ ಮೂಲಕ ಭಾರತೀಯರನ್ನು ತಾಯ್ನಾಡಿಗೆ ಕರೆತರುತ್ತಿದೆ ಎಂದು ಶಾಸಕರು ತಿಳಿಸಿದರು.

ಈ ಕುರಿತು ಈಗಾಗಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿದೇಶಾಂಗ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅದೇ ರೀತಿ ಉಡುಪಿ ಶಾಸಕರ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಿದ್ದು, ದೆಹಲಿಯ ರಾಯಭಾರಿ ಕಚೇರಿಯ ಮೂಲಕ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸಹಕಾರ ನೀಡುತ್ತಿರುವ ಬಗ್ಗೆ ಧರ್ಮಾಧ್ಯಕ್ಷರಿಗೆ ಶಾಸಕರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಧರ್ಮಗುರುಗಳಾದ ಚಾರ್ಲ್ಸ್ ಮಿನೇಜಸ್, ಸಮು ದಾಯದ ಪ್ರಮುಖರಾದ ರಾಜೇಶ್, ಆಲ್ವಿನ್ ಡಿಸೋಜ, ಡೆನಿಸ್ ಮಸ್ಕರೇನಸ್, ಶೆರ್ಲಿನ್, ನಗರ ಬಿಜೆಪಿ ಕಾರ್ಯದರ್ಶಿ ದಿನೇಶ್ ಅಮೀನ್, ಮಾಜಿ ನಗರಸಭಾ ಸದಸ್ಯರಾದ ಪ್ರಶಾಂತ್ ಭಟ್, ಅರುಣಾ ಪೂಜಾರಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News