ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

Update: 2024-09-02 16:40 GMT

ಉಡುಪಿ, ಸೆ.2: ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮತ್ತು ವಿಸ್ಡಂಮ್ ಇನ್‌ಸ್ಟಿಟ್ಯೂಟ್ ನೆಟ್ವರ್ಕ್ ಮಂಗಳೂರು ಇವರ ಸಹಯೋಗದಲ್ಲಿ ಸೆ.4ರಂದು ಮಿಲಾಗ್ರಿಸ್ ಕಾಲೇಜಿನಲ್ಲಿ ಕ್ಷಿಪ್ರ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಪೂರ್ವಾಹ್ನ 9:30ರಿಂದ ಅಪರಾಹ್ನ 2 ಗಂಟೆವರೆಗೆ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿಗಳು ಭಾಗವಹಿಸಿ ಉದ್ಯೋಗಾಕಾಂಕ್ಷಿಗಳ ಸಂದರ್ಶನ ನಡೆಸುವರು. ಯಾವುದೇ ಪದವಿ, ಸ್ನಾತಕೋತ್ತರ ಪದವೀಧರರು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News